ಬೆಂಗಳೂರು : ಇಂದು ನಡೆಯುವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಕುರಿತಂತೆ ಚರ್ಚೆ ನಡೆಸುವ ಹಿನ್ನೆಲೆಯಲ್ಲಿ ದಲಿತ ನಾಯಕರು ಅಲರ್ಟ್ ಆಗಿದ್ದು, ಸಚಿವ ಎಚ್ ಸಿ ಮಹದೇವಪ್ಪ ಮನೆಯಲ್ಲಿ ದಲಿತ ನಾಯಕರ ಸಭೆ ನಡೆದಿದೆ.ಮಹದೇವಪ್ಪ ನಿವಾಸದಲ್ಲಿ ಬ್ರೇಕ್ ಫಾಸ್ಟ್ ಮೀಟಿಂಗ್ ನಡೆದಿದೆ ಎಂದು ಹೇಳಲಾಗುತ್ತಿದೆ.
ಒಳಮೀಸಲಾತಿ ಕುರಿತಂತೆ ದಲಿತ ಸಮುದಾಯದ ಸಚಿವರು ಮುಖಂಡರಿಂದ ಚರ್ಚೆ ನಡೆದಿದ್ದು, ಸಚಿವ ಕೆ. ಹೆಚ್.ಮುನಿಯಪ್ಪ ರಾಜ್ಯಸಭಾ ಸದಸ್ಯ ಎಲ್ ಹನುಮಂತಯ್ಯ, ಪರಿಷತ್ ಸದಸ್ಯರಾದ ಸುಧಾಮದಾಸ್, ಡಾ. ತಿಮ್ಮಯ್ಯ ಭಾಗಿಯಾಗಿದ್ದು ಒಳ ಮೀಸಲಾತಿ ವಿಚಾರವಾಗಿ ಕಾಂಗ್ರೆಸ್ ನಾಯಕರು ಚರ್ಚಿಸಿದ್ದಾರೆ ಎಂದು ಹೇಳಲಾಗುತ್ತಿದೆ.
ಸಂಪುಟದಲ್ಲಿ ತೀರ್ಮಾನ : ಗೃಹ ಸಚಿವರು
ಒಳ ಮೀಸಲಾತಿ ಕುರಿತಂತೆ ಇಂದು ಸಂಪುಟ ಸಭೆಯಲ್ಲಿ ಚರ್ಚಿಸಿ ಸೂಕ್ತವಾದ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂದು ಗೃಹ ಇಲಾಖೆಯ ಸಚಿವ ಡಾ. ಜಿ ಪರಮೇಶ್ವರ್ ತಿಳಿಸಿದರು.ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಳ ಮೀಸಲಾತಿ ಬಗ್ಗೆ ಅಂತಿಮ ನಿರ್ಣಯ ತೆಗೆದುಕೊಳ್ಳಲು ನಿರ್ಧರಿಸಲಾಗಿದೆ ಎಂದು ಬೆಂಗಳೂರಲ್ಲಿ ಗೃಹ ಖಾತೆ ಸಚಿವ ಡಾ. ಜಿ ಪರಮೇಶ್ವರ್ ಹೇಳಿಕೆ ನೀಡಿದರು.
ಹಿಂದಿನ ಸರ್ಕಾರದಲ್ಲಿ ಚಿತ್ರದುರ್ಗ ಸಮಾವೇಶ ಮಾಡಿ ನಿರ್ಣಯ ತೆಗೆದುಕೊಂಡಿದ್ದು, ನ್ಯಾ. ಸದಾಶಿವ ಆಯೋಗದ ವರದಿ ಬಗ್ಗೆ ನಿರ್ಣಯಕ್ಕೆ ತೀರ್ಮಾನಿಸಲಾಗಿದೆ. ಬೊಮ್ಮಾಯಿ ಮುಖ್ಯಮಂತ್ರಿ ಆಗಿದ್ದಾಗ ವರದಿಯನ್ನೇ ತಿರಸ್ಕಾರ ಮಾಡಿದರು ಎಂದು ಅವರು ತಿಳಿಸಿದರು.ಕಾನೂನಾತ್ಮಕವಾಗಿ ಒಳ ಮೀಸಲಾತಿಯನ್ನು ಕೊಡಬೇಕಾಗುತ್ತದೆ.ನಾವೇ ಸವಿಧಾನಕ್ಕೆ ತಿದ್ದುಪಡಿ ತರಲು ಆಗುವುದಿಲ್ಲ.ಶಿಫಾರಸು ಮಾಡುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುತ್ತದೆ ಎಂದು ಬೆಂಗಳೂರಿನಲ್ಲಿ ಗ್ರಹ ಖಾತೆ ಸಚಿವಾಜಿ ಪರಮೇಶ್ವರ್ ತಿಳಿಸಿದರು.