ಹಾವೇರಿ : ಹಾನಗಲ್ನಲ್ಲಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬಿಜೆಪಿ ಜನವರಿ 20ರಂದು ಹಾವೇರಿಯಲ್ಲಿ ಪ್ರತಿಭಟನೆಗೆ ನಿರ್ಧರಿಸಿದೆ ಅಂದು ಮಧ್ಯಾಹ್ನದ ಎಸ್ಪಿ ಕಚೇರಿಯ ಮುಂದೆ ಬಿಜೆಪಿ ಪ್ರತಿಭಟನೆಗೆ ನಿರ್ಧರಿಸಿದೆ.
ಅಂದು ಮಧ್ಯಾಹ್ನ ಎಸ್ಪಿ ಕಚೇರಿ ಮುಂದೆ ಬಿಜೆಪಿ ಪ್ರತಿಭಟನೆಗೆ ನಿರ್ಧರಿಸಿದ್ದು, ಬಸವರಾಜ್ ಬೊಮ್ಮಾಯಿ ಆರ್ ಅಶೋಕ್ ಪ್ರತಿಭಟನೆಯ ನೇತೃತ್ವವನ್ನು ವಹಿಸಲಿದ್ದಾರೆ.ಹಾವೇರಿ ಜಿಲ್ಲೆಯ ಹಾನಗಲ್ ನಲ್ಲಿ ಕಳೆದ ಕೆಲವು ದಿನಗಳ ಹಿಂದೆ ಅಲ್ಪಸಂಖ್ಯಾತ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿತ್ತು ಈ ಪ್ರಕರಣ ಸಂಬಂಧ ಪೊಲೀಸರು ಇದುವರೆಗೂ 8 ಆರೋಪಿಗಳನ್ನು ಬಂಧಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ರಾಜ್ಯ ಬಿಜೆಪಿ ನಾಯಕರು ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ಅವ್ರು ಹಾಕಿದ್ದು ಈ ಘಟನೆಯನ್ನು ವಹಿಸುವಂತೆ ಆಗ್ರಹಿಸುತ್ತಿದ್ದಾರೆ. ಅದರ ಭಾಗವಾಗಿ ಜನವರಿ 20 ಶನಿವಾರದಂದು ಹಾವೇರಿಯ ಎಸ್ಪಿ ಕಚೇರಿಯ ಮುಂದೆ ಬಿಜೆಪಿ ಪ್ರತಿಭಟನೆ ನಡೆಸಲು ನಿರ್ಧರಿಸಿದೆ ಎಂದು ತಿಳಿದು ಬಂದಿದೆ.