ಉಡುಪಿ : ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಕ್ಷೇತ್ರಗಳನ್ನು ಗೆದ್ದರೆ ಮುಂದಿನ ಐದು ವರ್ಷಗಳ ವರೆಗೆ ಮುಖ್ಯಮಂತ್ರಿ ಆಗಿ ಸಿಎಂ ಸಿದ್ದರಾಮಯ್ಯ ಮುಂದುವರೆಯಲಿದ್ದಾರೆ ಎಂಬ ಯತಿಂದ್ರ ಹೇಳಿಕೆಗೆ ಕೇಂದ್ರ ಸಚಿವೆ ಶುಭಕಾರ್ಯ ಪ್ರತಿಕ್ರಿಯೆ ನೀಡಿದ್ದು ಲೋಕಸಭಾ ಚುನಾವಣೆ ಹೊತ್ತಿಗೆ ಕಾಂಗ್ರೆಸ್ ನಲ್ಲಿ ಇನ್ನೂ ದೊಡ್ಡ ಮಟ್ಟದ ಬಿರುಕು ಉಂಟಾಗುತ್ತದೆ ಎಂದು ತಿಳಿಸಿದರು.
ಉಡುಪಿಯಲ್ಲಿ ಈ ವಿಷಯದ ಕುರಿತಾಗಿ ಮಾತನಾಡಿದ ಅವರು, ಹೆಚ್ಚು ಸ್ಥಾನ ಗೆದ್ದರೆ ಸಿದ್ದರಾಮಯ್ಯ 5 ವರ್ಷ ಸಿಎಂ ಎಂದು ಹೇಳಿಕೆಗೆ ಯತೀಂದ್ರ ಹೇಳಿಕೆಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪ್ರತಿಕ್ರಿಯೆ ನೀಡಿದ್ದು, ಸರ್ಕಾರ ಆರಂಭವಾದ ಮೊದಲ ದಿನದಿಂದಲೇ ಈ ವಿಷಯವಾಗಿ ಗೊಂದಲ ಇದೆ ಸಿಎಂ, ಡಿಸಿಎಂ, ಮಂತ್ರಿ ಹಾಗೂ ಶಾಸಕರ ನಡುವೆ ಗೊಂದಲವಿದೆ ಎಂದು ತಿಳಿಸಿದರು.
ಈಗ ಕಾಂಗ್ರೆಸ್ ನಾಯಕರು ಗುಂಪಾಗಿ ರೆಸಾರ್ಟ್ ರಾಜಕೀಯ ಮಾಡಲು ಯೋಚನೆ ಮಾಡುತ್ತಿದ್ದಾರೆ.ಕಾಂಗ್ರೆಸ್ ನಲ್ಲಿ ಅಧಿಕಾರಕ್ಕಾಗಿ ಹೊಡೆದಾಟ ನಡೆಯುತ್ತಿದೆ.ಲೋಕಸಭೆ ಚುನಾವಣೆ ವೇಳೆಗೆ ಕಾಂಗ್ರೆಸ್ನ ಬಿರುಕು ದೊಡ್ಡದಾಗುತ್ತದೆಯಾವ ಹಂತಕ್ಕೆ ತಲುಪುತ್ತೆ ಎಂದು ಜನರು ಊಹೆ ಕೂಡ ಮಾಡಲು ಕಷ್ಟವಾಗುತ್ತದೆ ಎಂದರು.
ಕಾಂಗ್ರೆಸ್ನ ಗೆಳೆಯರು ಸರ್ಕಾರ ಬಹಳ ದಿನ ನಡೆಯಲ್ಲ ಎಂದಿದ್ದಾರೆ ಏನಾಗುತ್ತದೆ ಎಂದು ಕಾದು ನೋಡೋಣ ಎಂದು ಕೇಂದ್ರ ಸಚಿವ ಶೋಭಾ ಕರಂದ್ಲಾಜೆ ತಿಳಿಸಿದರು ಉಡುಪಿ ನಗರದಲ್ಲಿ ಕೇಂದ್ರ ಸಚಿವ ಶೋಭಾ ಕರಂದ್ಲಾಜೆ ಹೇಳಿಕೆ ನೀಡಿದರು.