ಕಲಬುರಗಿ: ಕಲಬುರಗಿಗೆ ಪ್ರಧಾನಿ ನರೇಂದ್ರ ಮೋದಿ ಆಗಮನವಾಗಿದೆ. ದೆಹಲಿಯಿಂದ ವಿಶೇಶ ವಿಮಾನದಲ್ಲಿ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿಯವರನ್ನು ಸರ್ಕಾರದ ಪರವಾಗಿ ಸಚಿವ ಪಾಟೀಲ್ ಸ್ವಾಗತ ಮಾಡಿದರು.
ಪಿಎಂ ಆವಾಸ್ ಯೋಜನೆಯಡಿ ಬಡವರಿಗೆ ಮನೆಗಳ ಹಕ್ಕುಪತ್ರ ವಿತರಣೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ಸೊಲ್ಲಾಪುರಕ್ಕೆ ತೆರಳಲಿರುವ ಅವರು ಕಲಬುರಗಿ ವಿಮಾನ ನಿಲ್ದಾಣಕ್ಕೆ ಬಂದಿಳಿದು ಮುಂದಿನ ಪ್ರಯಾಣ ಕೈಗೊಳ್ಳಲಿದ್ದಾರೆ.
ಈ ನಡುವೆ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಸೊಲ್ಲಾಪುರದಿಂದ ಬೆಂಗಳೂರಿಗೆ ತೆರಳುವ ಮಾರ್ಗದಲ್ಲಿ ಕಲಬುರಗಿ ವಿಮಾನ ನಿಲ್ದಾಣದಲ್ಲಿ ನಿಲುಗಡೆ ನೀಡಲಿರುವ ಹಿನ್ನೆಲೆಯಲ್ಲಿ ಶುಕ್ರವಾರ ಬೆಳಿಗ್ಗೆ 6 ರಿಂದ ಸಂಜೆ 6 ರವರೆಗೆ ಕಲಬುರಗಿ ವಿಮಾನ ನಿಲ್ದಾಣದ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಆದೇಶ ಹೊರಡಿಸಿದ್ದಾರೆ. ಜನವರಿ 19 ರಂದು ಕಲಬುರಗಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿರುವ ಕಾರಣ ಕಲಬುರಗಿ ವಿಮಾನ ನಿಲ್ದಾಣದ ಸುತ್ತಮುತ್ತ 10 ಕಿಮೀ ವ್ಯಾಪ್ತಿಯಲ್ಲಿ ಡ್ರೋಣ್ ಕ್ಯಾಮರಾ ಹಾರಾಟ ನಿಷೇಧಿಸಲಾಗಿದೆ. CRPC ಸೆಕ್ಷನ್ 144 ಅಡಿಯಲ್ಲಿ ಡ್ರೋನ್ ಕ್ಯಾಮರಾ ಹಾರಾಟ ನಿಷೇಧಿಸಿ ಕಲಬುರಗಿ ಡಿಸಿ ಆದೇಶ ಹೊರಡಿಸಿದ್ದಾರೆ.