ಬೆಂಗಳೂರು: ದೆಹಲಿ ಮೂಲದ ಸ್ಕ್ವಾಚ್ ಸಂಸ್ಥೆಯು ಸ್ವತಂತ್ರ ವಿಚಾರ ತಜ್ಞ ವೇದಿಕಾ ಸಂಸ್ಥೆಯಾಗಿದ್ದು 1997ರಲ್ಲಿ ಸ್ಥಾಪಿತವಾಗಿರುತ್ತದೆ. ಈ ಸಂಸ್ಥೆಯು 2003 ರಿಂದ ಸ್ಕಾಚ್ ಪ್ರಶಸ್ತಿಯನ್ನು ವಿವಿಧ ಸಂಸ್ಥೆಗಳು ಸಾಧಿಸಿರುವ ಉತ್ತಮ ಆಡಳಿತ ನಿರ್ವಹಣೆ, ಹಣಕಾಸು,ತಾಂತ್ರಿಕತೆ ಅಳವಡಿಕೆ ಹಾಗೂ ಆಂತರಿಕ ಬೆಳವಣಿಗೆಗಾಗಿ ನೀಡುತ್ತಾ ಬಂದಿದೆ. ಸ್ಕಾಚ್ ಸಂಸ್ಥೆಯು ತನ್ನ ಅತ್ಯುನ್ನತ ಪ್ರಶಸ್ತಿಗಳನ್ನು ಸಂಸ್ಥೆಗಳು ಮಾಡಿರುವ ಅತಿ ಉತ್ತಮ ಸಾಧನೆ ಹಾಗೂ ಅವುಗಳಿಂದ ಉಂಟಾಗಿರುವ ಪರಿಣಾಮಗಳನ್ನು ಆಧರಿಸಿ ಆಯ್ಕೆ ಮಾಡಿ ನೀಡುತ್ತದೆ
ಕರಾರಸಾ ನಿಗಮವು, ಕರ್ನಾಟಕದ ನಿವಾಸಿ ಮಹಿಳೆಯರಿಗಾಗಿ ಜಾರಿಗೊಳಿಸಿರುವ ಉಚಿತ ಪ್ರಯಾಣದ ಶಕ್ತಿ ಯೋಜನೆ ಯ ಪರಿಣಾಮಕಾರಿ ಅನುಷ್ಠಾನಕ್ಕೆ ಹಾಗೂ ವಿನೂತನ ಕಾರ್ಮಿಕ ಕಲ್ಯಾಣ ಉಪಕ್ರಮಗಳಿಗೆ 2023 ನೇ ಸಾಲಿನ 02 ಸ್ಕಾಚ್ ಪ್ರಶಸ್ತಿಗಳು ಲಭಿಸಿದ್ದು, ಪ್ರಶಸ್ತಿ ಪ್ರಧಾನ ಸಮಾರಂಭವು 10 ನೇ ಫೆಬ್ರವರಿ 2024 ರಂದು ದೆಹಲಿಯ ಕಾನ್ಸ್ಟಿಟ್ಯುಷನ್ ಕ್ಲಬ್ ಆಫ್ ಇಂಡಿಯಾ ಇಲ್ಲಿ ಜರುಗಲಿದೆ.