ದಾವಣಗೆರೆ :ಜಿಲ್ಲಾ ಮಟ್ಟದ ವ್ಯಾಪ್ತಿಯಲ್ಲಿ ಬರುವ ಮಕ್ಕಳ ಪಾಲನ ಸಂಸ್ಥೆಗಳು ಕಡ್ಡಾಯವಾಗಿ ಬಾಲನ್ಯಾಯ ಕಾಯ್ದೆಯಡಿ ನೋಂದಣಿ ಮಾಡಿಕೊಳ್ಳಬೇಕು. ಹಾಗೂ ನೋಂದಣಿಯಾದ ಸಂಸ್ಥೆಗಳು ಪ್ರತಿ ಐದು ವರ್ಷಕ್ಕೊಮ್ಮೆ ನವೀಕರಣ ಮಾಡಿಸಿಕೊಳ್ಳಬೇಕು.
ನೊಂದಣಿಯಾಗದೆ ಇರುವ ಸಂಸ್ಥೆಗಳನ್ನು ಕಡ್ಡಾಯವಾಗಿ ನೊಂದಣಿ ಮಾಡಿಸುವ ಸಲುವಾಗಿ ತಮ್ಮ ತಾಲ್ಲೂಕುಗಳಿಗೆ ವಿಶೇಷ ಕಾರ್ಯಚರಣೆ ಮಾಡಿ ನೊಂದಣಿ ಮಾಡಿಸಬೇಕು. ನೊಂದಣಿಯಾಗದ ಸಂಸ್ಥೆಗಳ ವಿರುದ್ದ ಕ್ರಮ ಕೈಗೊಳ್ಳಲಾಗುವುದು. ನೋಂದಣಿಯಗದೆ ಇರುವ ಮಕ್ಕಳ ಪಾಲನ ಸಂಸ್ಥೆಗಳ ಮಾಹಿತಿಯನ್ನು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು, ಜಿಲ್ಲಾ ಮಕ್ಕಳ ಘಟಕ, ಬಾಲಭವನ ಕಚೇರಿ, ಜೆ.ಹೆಚ್.ಪಟೇಲ್ ಬಡಾವಣೆ, ಶಾಮನೂರು ಹತ್ತಿರ ದಾವಣಗೆರೆ ಕಚೇರಿಗೆ ನೀಡಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 9632962676,9844198275 ಸಂಪರ್ಕಿಸಲು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ರಕ್ಷಣಾಧಿಕಾರಿ ತಿಳಿಸಿದ್ದಾರೆ.