ಶಿವಮೊಗ್ಗ: ಪದವಿ ವ್ಯಾಸಂಗ ಮಾಡುತ್ತಿದ್ದಂತ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರೋ ಘಟನೆ ಶಿವಮೊಗ್ಗದ ತೀರ್ಥಹಳ್ಳಿಯಲ್ಲಿ ನಡೆದಿದೆ.
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಬಾಳೆಬೈಲಿನಲ್ಲಿ ಡಿಗ್ರಿ ವ್ಯಾಸಂಗ ಮಾಡುತ್ತಿದ್ದಂತ ವಿದ್ಯಾರ್ಥಿನಿ ಅಧೀಕ್ಷಾ(20) ದುಡುಕಿನ ನಿರ್ಧಾರವನ್ನು ಕೈಗೊಂಡಿದ್ದಾರೆ. ತಂದೆ-ತಾಯಿ ಮನೆಯಲ್ಲಿ ಇಲ್ಲದಂತ ಸಂದರ್ಭದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಊರಲ್ಲಿ ಇಲ್ಲದಂತ ತಂದೆ-ತಾಯಿಗಳು ಮರಳಿ ಮನೆಗೆ ಬಂದಾಗ ಈ ವಿಷಯ ಬೆಳಕಿಗೆ ಬಂದಿದೆ. ವಿದ್ಯಾರ್ಥಿನಿ ಅಧೀಕ್ಷಾ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಸಂಬಂಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅತೀ ಶೀಘ್ರದಲ್ಲಿ 1,500 ಗ್ರಾಮ ಲೆಕ್ಕಾಧಿಕಾರಿ ಹುದ್ದೆ ನೇಮಕಕ್ಕೆ ಕ್ರಮ : ಸಚಿವ ಕೃಷ್ಣ ಬೈರೇಗೌಡ
ರಾಮ ಮಂದಿರ ಸಮಾರಂಭದಲ್ಲಿ ಯುಪಿ ಸಿಎಂ ಯೋಗಿ ಆದಿತ್ಯನಾಥ್ಗೆ ಕೊಲ್ಲುವ ಬೆದರಿಕೆ ಹಾಕಿದ ಖಲಿಸ್ತಾನ್ ಉಗ್ರ