ಬೆಂಗಳೂರು: ರಾಮ ಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆಯ ಕಾರ್ಯಕ್ರಮ ನಾಳೆ ನಡೆಯಲಿದೆ. ಈ ಸಂದರ್ಭದಲ್ಲಿ ಭಕ್ತಿ ಪರವಶತೆಯಲ್ಲಿ ಮುಳುಗೋದಕ್ಕೆ ನಾಳೆ ಸರ್ಕಾರಿ ರಜೆ ನೀಡುವಂತೆ ಸಿಎಂ ಸಿದ್ಧರಾಮಯ್ಯ ಅವರಿಗೆ ಪತ್ರ ಬರೆದು ವಿಪಕ್ಷ ನಾಯಕ ಆರ್.ಅಶೋಕ್ ಒತ್ತಾಯಿಸಿದ್ದಾರೆ.
ಈ ಕುರಿತಂತೆ ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಪತ್ರ ಬರೆದಿರುವಂತ ಅವರು, ಆ ಪತ್ರದಲ್ಲಿ 500 ವರ್ಷಗಳ ಹೋರಾಟ, ತ್ಯಾಗದ ಫಲವಾಗಿ ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ನಿರ್ಮಾಣವಾಗಿ ಜನವರಿ 22 ರಂದು ವಿಗ್ರಹ ಪ್ರಾಣ ಪ್ರತಿಷ್ಠಾಪನೆ ನಡೆಯುತ್ತಿದೆ. ಈ ದಿನದಂದು ಪ್ರತಿ ಮನೆಗಳಲ್ಲಿ ಮತ್ತು ಧಾರ್ಮಿಕ ಕ್ಷೇತ್ರಗಳಲ್ಲಿ ದೀಪ ಬೆಳಗುವುದು, ಭಜನೆ, ಶ್ರೀರಾಮನ ಆರಾಧನೆ ನಡೆಯುತ್ತಿದೆ. ಇಡೀ ರಾಜ್ಯದಲ್ಲಿ ಸಂಭ್ರಮ, ಸಡಗರದ ಆಚರಣೆ ನಡೆಯಲಿದೆ ಎಂದಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರು ಕೂಡ ವಿಗ್ರಹ ಪ್ರಾಣ ಪ್ರತಿಷ್ಠಾಪನೆಯಲ್ಲಿ ಭಾಗವಹಿಸಿದ್ದು, ಈಗಾಗಲೇ ಕೇಂದ್ರ ಸರ್ಕಾರದ ಕಚೇರಿಗಳಿಗೆ ಅರ್ಧ ದಿನದ ರಜೆ ಘೋಷಿಸಿದ್ದಾರೆ. ರಾಜ್ಯದಲ್ಲೂ ದೊಡ್ಡ ಮಟ್ಟದ ಆಚರಣೆ ನಡೆಯುತ್ತಿದ್ದು, ಆ ದಿನ ಕೆಲಸ ಮಾಡುವುದರಿಂದ ಆಚರಣೆಗೆ ತೊಡಕು ಉಂಟಾಗಬಹುದು. ಆದ್ದರಿಂದ ಸರ್ಕಾರಿ ಕಚೇರಿ, ಶಾಲಾ ಕಾಲೇಜುಗಳು, ಸಾರ್ವಜನಿಕ ಉದ್ದಿಮೆ ಸೇರಿದಂತೆ ಎಲ್ಲ ಕಡೆಗಳಲ್ಲಿ ಅನುಕೂಲವಾಗುವಂತೆ ಜನವರಿ 22 ರಂದು ಒಂದು ದಿನದ ಮಟ್ಟಿಗೆ ಸರ್ಕಾರಿ ರಜೆಯನ್ನುಘೋಸಬೇಕೆಂದುತಮ್ಮಲ್ಲಿ ಮನವಿ ಮಾಡಿದ್ದಾರೆ.
Nanna Rama: ‘ರಾಮ ಮಂದಿರ ಉದ್ಘಾಟನೆ’ಗೆ ಮುನ್ನಾ ಬಿಜೆಪಿಯಿಂದ ‘ನನ್ನ ರಾಮ’ ಅಭಿಯಾನ: ‘X’ನಲ್ಲಿ ಪುಲ್ ಟ್ರೆಂಡಿಂಗ್