ಹಾಸನ : ಶಾರ್ಟ್ ಸರ್ಕ್ಯೂಟ್ ಇಂದ ಖಾಸಗಿ ಆಸ್ಪತ್ರೆಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಹಾಸನದ ಮಂಜುನಾಥ ಆಸ್ಪತ್ರೆಯಲ್ಲಿ ಈ ಅಗ್ನಿ ಅವಘಡ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಆಸ್ಪತ್ರೆಯ ಎಕ್ಸರೇ ರೂಮ್ನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ತಿಳಿದುಬಂದಿದೆ.
ಹಾಸನ ನಗರದ ಶಂಕರ ಮಠ ರಸ್ತೆಯಲ್ಲಿರುವ ಮಂಜುನಾಥ್ ಆಸ್ಪತ್ರೆಯಲ್ಲಿ ಈ ಅಗ್ನಿ ಅವಘಡ ಸಂಭವಿಸಿದೆ. ಹಾಸನದ ಆಸ್ಪತ್ರೆಯಲ್ಲಿ ಕೆಲಕಾಲ ಆತಂಕ ಸೃಷ್ಟಿಯಾಗಿತ್ತು.ಕೂಡಲೇ ಕುಟುಂಬಸ್ಥರು ತಮ್ಮ ರೋಗಿಗಳನ್ನು ಹೊರ ಕರೆತಂದಿದ್ದಾರೆ.
ಈ ವೇಳೆ ಬೆಂಕಿ ಕಾಣಿಸಿಕೊಂಡಿದ್ದರಿಂದ ರೋಗಿಗಳು ಗಾಬರಿಗೊಂಡಿದ್ದಾರೆ. ಕೂಡಲೇ ಆಸ್ಪತ್ರೆಯ ಸಿಬ್ಬಂದಿ ಕಿಟಕಿ ಕ್ಲಾಸ್ ಗಳನ್ನು ಒಡೆದು ಹಾಕಿದ್ದಾರೆ. ತಕ್ಷಣ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಘಟನೆಯ ಕುರಿತು ಇನ್ನಷ್ಟು ಮಾಹಿತಿ ಬರಬೇಕಿದೆ.