ತಮಿಳುನಾಡು ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆಯು ರಾಮಮಂದಿರ ಉದ್ಘಾಟನೆ ಕಾರ್ಯಕ್ರಮ ವೀಕ್ಷಣೆಯನ್ನು ನಿಷೇಧಿಸಿಲ್ಲ. ಈ ರೀತಿಯ ಯಾವುದೇ ಆದೇಶಗಳನ್ನು ನಾವು ಜಾರಿ ಮಾಡಿಲ್ಲ. ರಾಮಮಂದಿರಗಳಲ್ಲಿ ಚಟುವಟಿಕೆ ನಡೆಸಲು ಯಾವುದೇ ಅಡ್ಡಿಮಾಡಿಲ್ಲ ಎಂದು ಸ್ಪಷ್ಟಪಡಿಸಿದೆ. ಈ ಮೂಲಕ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಆರೋಪವನ್ನು ತಮಿಳುನಾಡು ಸರ್ಕಾರ ತಳ್ಳಿಹಾಕಿದೆ.
ರಾಮಮಂದಿರ ಉದ್ಘಾಟನೆ ಸಹಿತ ನಾನಾ ಧಾರ್ಮಿಕ ಚಟುವಟಿಕೆಗಳ ನೇರ ವೀಕ್ಷಣೆಗೆ ತಮಿಳುನಾಡು ಸರ್ಕಾರ ಅವಕಾಶ ನೀಡುತ್ತಿಲ್ಲ. ಕೇಬಲ್ ಕಡಿತಗೊಳಿಸಿ ಕಾರ್ಯಕ್ರಮ ವೀಕ್ಷಿಸದಂತೆ ಮಾಡಲಾಗುತ್ತಿದೆ. ತಮಿಳುನಾಡು ಹಿಂದೂ ವಿರೋಧಿ ಹಾಗೂ ದ್ವೇಷದ ಪ್ರಕ್ರಿಯೆ ಎಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಗಂಭೀರ ಆರೋಪ ಮಾಡಿದ್ದಾರೆ. ತಮಿಳುನಾಡಿನ ಸೇಲಂನಲ್ಲಿ ಆಯೋಜಿಸಿರುವ ಡಿಎಂಕೆ ಯುವ ಸಮಾವೇಶದ ಯಶಸ್ಸನ್ನು ದಿಕ್ಕುತಪ್ಪಿಸುವ ನಿಟ್ಟಿನಲ್ಲಿಯೇ ರಾಮಮಂದಿರ ಕಾರ್ಯಕ್ರಮ ವೀಕ್ಷಣೆಗೆ ಅಡ್ಡಿಪಡಿಸುತ್ತಿದ್ದಾರೆ ಎನ್ನುವ ಸುಳ್ಳು ಸುದ್ದಿಯನ್ನು ಹಬ್ಬಿಸಲಾಗುತ್ತಿದೆ ಎಂದು ತಮಿಳುನಾಡು ಹಿಂದೂ ಧಾರ್ಮಿಕ ದತ್ತಿ ಇಲಾಖೆ ಸಚಿವ ಸೇಕರ ಬಾಬು ಹೇಳಿದ್ದಾರೆಯಾಗಿದೆ.
.