ಬೆಂಗಳೂರು: ಅಯೋಧ್ಯೆ ರಾಮಮಂದಿರ ಪ್ರತಿಷ್ಠಾಪನಾ (Ram Mandir) ಕಾರ್ಯಕ್ರಮದ ಹಿನ್ನೆಲೆಯಲ್ಲಿ, ಇಂದು ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಬಿಗಿ ಭದ್ರತೆ ಕೈಗೊಂಡು ಶಾಂತಿ-ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಪೊಲೀಸರು ಬಿಗಿ ಭದ್ರತೆಯನ್ನು ಮಾಡಲಿದ್ದಾರೆ.
ಅಯೋಧ್ಯೆ ಶ್ರೀರಾಮ ಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಗರದ ಸೂಕ್ಷ್ಮ ಹಾಗೂ ಅತಿ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. ರ್ಯಾಲಿ, ಪ್ರತಿಭಟನೆ, ಮೆರವಣಿಗೆಗೆ ಅನುಮತಿ ನೀಡಕೂಡದು. ಆಯಾ ಧಾರ್ಮಿಕ ಮುಖಂಡರೊಂದಿಗೆ ಸಭೆ ನಡೆಸಿ ಸೌಹಾರ್ದತೆ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಸಭೆ ನಡೆಸುವಂತೆಯೂ ತಿಳಿಸಿದ್ದಾರೆ. ಭದ್ರತೆಗಾಗಿ ಸುತ್ತಮುತ್ತಲಿನ ಜಿಲ್ಲೆಗಳಿಂದ ಹೆಚ್ಚುವರಿ ಪೊಲೀಸರನ್ನು ಕರೆಯಿಸಿಕೊಳ್ಳಲಾಗುತ್ತಿದೆ. ಇದಲ್ಲದೇ ಅಯ್ಯೋಧೆಯಲ್ಲಿ ಕೂಡ ಉದ್ಘಾಟನಾ ಕಾರ್ಯಕ್ರಮದಲ್ಲಿ ಗಣ್ಯಾತಿಗಣ್ಯರು ಭಾಗವಹಿಸುತ್ತಿದ್ದಾರೆ. ಹೀಗಾಗಿ ರಾಮಮಂದಿರದ ರಕ್ಷಣೆ ಮತ್ತು ಗಣ್ಯರ ಭದ್ರತೆಗಾಗಿ ಜನವರಿ 22ಕ್ಕೆ ಮೂರು ಪದರದ ಭದ್ರತಾ ವ್ಯವಸ್ಥೆಯನ್ನು ಅಳವಡಿಸಲಾಗಿದೆ.