ಬೆಂಗಳೂರು: ನಿನ್ನೆ ರಾತ್ರಿ ಸಂಭವಿಸಿದಂತ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು, ಚಿಕಿತ್ಸೆ ಪಡೆಯುತ್ತಿದ್ದಂತ ಕರ್ನಾಟಕದ ಖ್ಯಾತ ಪುಟ್ ಬಾಲ್ ಆಟಗಾರ ಮೊನೀಶ್.ಕೆ ಚಿಕಿತ್ಸೆ ಫಲಿಸದೇ ಇಂದು ಸಾವನ್ನಪ್ಪಿದ್ದಾರೆ. ಅವರ ನಿಧನಕ್ಕೆ ಸಿಎಂ ಸಿದ್ಧರಾಮಯ್ಯ ಸಂತಾಪ ಸೂಚಿಸಿದ್ದಾರೆ.
ಈ ಕುರಿತಂತೆ ಟ್ವಿಟ್ ಮಾಡಿರುವಂತ ಅವರು, ರಾಜ್ಯದ ಖ್ಯಾತ ಫುಟ್‌ಬಾಲ್ ಆಟಗಾರ ಮೊನೀಶ್.ಕೆ ಅವರ ನಿಧನದ ಸುದ್ದಿ ಕೇಳಿ ಬೇಸರವಾಯಿತು. ನಿನ್ನೆ ರಾತ್ರಿ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಗುಣಮುಖರಾಗುತ್ತಾರೆಂದು ನಂಬಿದ್ದೆ, ಈಗ ಆ ನಂಬಿಕೆ ಹುಸಿಯಾಗಿದೆ ಎಂದು ತಿಳಿಸಿದ್ದಾರೆ.
ಕ್ರೀಡಾ ಬದುಕಿನಲ್ಲಿ ಇನ್ನಷ್ಟು ಎತ್ತರಕ್ಕೆ ಬೆಳೆಯಬೇಕಿದ್ದ ಯುವ ಪ್ರತಿಭೆಯೊಂದು ಹೀಗೆ ಆರಂಭದಲ್ಲೇ ಅಂತ್ಯ ಕಂಡಿದ್ದು ಅತ್ಯಂತ ದುಃಖದ ವಿಚಾರ. ಮೃತ ಯುವಕನ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.
ರಾಜ್ಯದ ಖ್ಯಾತ ಫುಟ್‌ಬಾಲ್ ಆಟಗಾರ ಮೊನೀಶ್.ಕೆ ಅವರ ನಿಧನದ ಸುದ್ದಿ ಕೇಳಿ ಬೇಸರವಾಯಿತು. ನಿನ್ನೆ ರಾತ್ರಿ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಗುಣಮುಖರಾಗುತ್ತಾರೆಂದು ನಂಬಿದ್ದೆ, ಈಗ ಆ ನಂಬಿಕೆ ಹುಸಿಯಾಗಿದೆ.
ಕ್ರೀಡಾ ಬದುಕಿನಲ್ಲಿ ಇನ್ನಷ್ಟು ಎತ್ತರಕ್ಕೆ ಬೆಳೆಯಬೇಕಿದ್ದ ಯುವ… pic.twitter.com/TgL33npzEH— CM of Karnataka (@CMofKarnataka) January 21, 2024
Jai Shri Ram On Ambani House : ‘ಅಂಬಾನಿ ಮನೆ’ ಮೇಲೆ ರಾರಾಜಿಸಿದ ‘ಜೈ ಶ್ರೀ ರಾಮ್ ಬರಹ
Covid19 Update: ರಾಜ್ಯದಲ್ಲಿಂದು 89 ಜನರಿಗೆ ಕೊರೋನಾ, 74 ಸೋಂಕಿತರು ಗುಣಮುಖ