ಗದಗ : ಜಿಲ್ಲೆಯ ಗಜೇಂದ್ರಗಡ ಪಟ್ಟಣದಲ್ಲಿ ತಾಜುದ್ದೀನ್ ದಫೇದಾರ್ ಎಂಬ ಯುವಕನೊಬ್ಬ ಅಯೋಧ್ಯೆ ರಾಮ ಮಂದಿರದ ಮೇಲೆ ಹಸಿರು ಬಾವುಟ ಹಾರಿಸಿರುವಂತೆ ಫೋಟೋ ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾನೆ. ಗಜೇಂದ್ರಗಡ ಪೊಲೀಸರು ತಾಜುದ್ದೀನ್ ದಫೇದಾರ್ ಎಂಬಾತನನ್ನು ಬಂಧಿಸಿದ್ದಾರೆ. ಪಟ್ಟಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
ಗದಗ : ಇಡೀ ದೇಶವೇ ಇವತ್ತು ಐತಿಹಾಸಿಕ ದಿನಕ್ಕೆ ಸಾಕ್ಷಿ ಆಗಲಿದ್ದು, ರಾಮಲೆಲ್ಲ ಪ್ರಾಣ ಪ್ರತಿಷ್ಠಾಪನಕ್ಕೆ ರಾಮ ಭಕ್ತರು ಎದುರು ನೋಡುತ್ತಿದ್ದಾರೆ. ಎಲ್ಲರ ಮನೆಯಲ್ಲೂ ಸಂಭ್ರಮದ ಕಳೆ ಬಂದಿದೆ. ಆದರೆ ಗದಗದಲ್ಲಿ ಕಿಡಿಗೇಡಿ ಒಬ್ಬ ರಾಮಮಂದಿರದ ಮೇಲೆ ಹಸಿರು ಬಾವುಟ ಹಾರಾಡುವಂತೆ ಫೋಟೋ ತಿರುಚಿ ಸಮಾಜಘಾತನಾದಲ್ಲಿ ಹರಿಬಿಟ್ಟಿದ್ದಾನೆ.
ಅಯೋಧ್ಯೆ ರಾಮ ಮಂದಿರದಲ್ಲಿ ರಾಮನ ಪ್ರಾಣಪ್ರತಿಷ್ಠಾಪನೆಗೆ ಕ್ಷಣಗಣನೆ ಆರಂಭದಲ್ಲಿ ಇಂತಹ ಘಟನೆ ನಡೆದಿದೆ. ರಾಮ ಮಂದಿರದ ಮೇಲೆ ಹಸಿರು ಬಾವುಟ ಹಾಕಿರುವ ಚಿತ್ರ ಫೇಸ್ಬುಕ್ನಲ್ಲಿ ಫೋಸ್ಟ್ ಮಾಡಲಾಗಿದೆ. ಸುದ್ಧಿ ತಿಳಿಯುತ್ತಿದ್ದಂತೆ ಹಿಂದೂಪರ ಸಂಘಟನೆಗಳ ಮುಖಂಡರು ಆಕ್ರೋಶ ಹೊರ ಹಾಕಿದ್ದು ಗಜೇಂದ್ರಗಡ ಪೊಲೀಸರು ತಾಜುದ್ದೀನ್ ದಫೇದಾರ್ ಎಂಬಾತನನ್ನು ಬಂಧಿಸಿದ್ದಾರೆ.
ಗಜೇಂದ್ರಗಡ ಪಟ್ಟಣದಲ್ಲಿ ತಾಜುದ್ದೀನ್ ದಫೇದಾರ್ ಎಂಬ ಯುವಕನೊಬ್ಬ ಅಯೋಧ್ಯೆ ರಾಮ ಮಂದಿರದ ಮೇಲೆ ಹಸಿರು ಬಾವುಟ ಹಾರಿಸಿರುವಂತೆ ಫೋಟೋ ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾನೆ. ಇದೀಗ ಪಟ್ಟಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಬಜರಂಗದಳ ಸೇರಿ ವಿವಿಧ ಸಂಘಟನೆಗಳ ಕಾರ್ಯಕರ್ತರು ತಡರಾತ್ರಿ ಪೊಲೀಸ್ ಠಾಣೆಗೆ ದೌಡಾಯಿಸಿ ಯುವಕನಿಗೆ ತರಾಟೆಗೆ ತೆಗೆದುಕೊಂಡಿದ್ದಾರೆ. ಯುವಕನ ವಿರುದ್ಧ ಎಫ್ಐಆರ್ ದಾಖಲಾಗಿದೆ ಎಂದು ಪಿಎಸ್ಐ ಸೋಮನಗೌಡರು ಮಾಹಿತಿ ನೀಡಿದ್ದಾರೆ.