ಬೆಂಗಳೂರು: ಕಾಂಗ್ರೆಸ್ ನವರು ಶ್ರೀರಾಮನ ವಿರುದ್ಧ ಇದ್ದಾರೆ ಎಂದು ಅಪಪ್ರಚಾರ ಮಾಡುವುದನ್ನು ನಾವು ಖಂಡಿಸುತ್ತೇವೆ. ನಾವು ಮಹತ್ಮಾಗಾಂಧಿ ಹೇಳಿದ ರಾಮಾಯಣದ ರಾಮನನ್ನು ಪೂಜಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಶ್ರೀ ರಾಮ ಟೆಂಪಲ್ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಶ್ರೀ ಸೀತಾ, ರಾಮ, ಲಕ್ಷ್ಮಣ ಹಾಗೂ 33 ಅಡಿ ಎತ್ತರದ ಏಕಶಿಳಾ ಆಂಜನೇಯ ಸ್ವಾಮಿಯ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ಮಹಾತ್ಮಾಗಾಂಧಿ ಹೇಳಿದ ರಾಮಾಯಣದ ರಾಮನನ್ನು ಪೂಜಿಸುತ್ತೇವೆ
ಮಹಾತ್ಮಾಗಾಂಧಿಜಿ ರಘುಪತಿ ರಾಘವ ರಾಜಾರಾಮ್ ಎಂದು ಭಜಿಸುತ್ತಿದ್ದು, ಸಾಯುವಾಗಲೂ ಹೇ ರಾಮ್ ಎಂದೇ ಜೀವ ಬಿಟ್ಟರು. ಕಾಂಗ್ರೆಸ್ ಮಹಾತ್ಮಾಗಾಂಧಿ ಹೇಳಿದ ರಾಮಾಯಣದ ರಾಮನನ್ನು ಪೂಜಿಸುತ್ತದೆ. ಬಿಜೆಪಿ ಹೇಳಿದ ರಾಮನನ್ನು ಅಲ್ಲ ಎಂದರು.
ಅನೇಕ ರಾಜ್ಯಗಳು ರಜೆ ಘೋಷಿಸಿಲ್ಲ
ಕರ್ನಾಟಕದಲ್ಲಿ ಕಾರ್ಯಕ್ರಮದ ಅಂಗವಾಗಿ ರಜೆ ಗೋಷಣೆ ಮಾಡಿಲ್ಲ ಎಂಬಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸಿಎಂ, ಕೇಂದ್ರ ಸರ್ಕಾರ ಅರ್ಧ ದಿನ ರಜೆ ಕೊಟ್ಟಿದ್ದಾರೆ. ದೆಹಲಿ, ಪಂಜಾಬ್, ತೆಲಂಗಾಣ, ಪಶ್ಚಿಮ ಬಂಗಾಲ, ತಮಿಳುನಾಡು,ಕೇರಳದಲ್ಲಿಯೂ ರಜೆ ಕೊಟ್ಟಿಲ್ಲ ಎಂದರು.
‘ಶ್ರೀರಾಮಚಂದ್ರ’ ಎಲ್ಲರ ದೇವರು, ಕೇವಲ ‘ಬಿಜೆಪಿ’ಯವರ ದೇವರಲ್ಲ – ಸಿಎಂ ಸಿದ್ಧರಾಮಯ್ಯ ಕಿಡಿಕಿಡಿ
Ayodhya Temple: ಅಯೋಧ್ಯೆ ರಾಮನಲ್ಲಿ ಕ್ಷಮೆಯಾಚಿಸುತ್ತೇನೆ: ಪ್ರಾಣ ಪ್ರತಿಷ್ಠಾ ಬಳಿಕ ಪ್ರಧಾನಿ ಮೋದಿ ಹೇಳಿಕೆ