ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ರಾಮ ಮಂದಿರ ಉದ್ಘಾಟನೆಗಾಗಿ ಹಾಕಿದ್ದಂತ ಬ್ಯಾನರ್ ಅನ್ನು ಕಿಡಿಗೇಡಿಗಳು ಹರಿದು ಹಾಕಿದ್ದಾರೆ. ಅವರನ್ನು ಬಂಧಿಸುವಂತೆ ಗ್ರಾಮಸ್ಥರು ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಗಿಡ್ಡಬ್ಬನಹಳ್ಳಿಯಲ್ಲಿ ಇಂದು ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮದ ಸಲುವಾಗಿ ಹಾಕಲಾಗಿದ್ದಂತ ಬ್ಯಾನರ್ ಅನ್ನು ಕಿಡಿಗೇಡಿಗಳು ಹರಿದು ಹಾಕಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.
ಈ ಹಿನ್ನಲೆಯಲ್ಲಿ ಬ್ಯಾನರ್ ಹರಿದಂತ ಕಿಡಿಗೇಡಿಗಳನ್ನು ಬಂಧಿಸುವಂತೆ ಗ್ರಾಮಸ್ಥರು ಕೇಸರಿ ಭಾವುಟಗಳನ್ನು ಹಿಡಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಹೀಗೆ ಪ್ರತಿಭಟನೆ ನಡೆಸುತ್ತಿರುವಂತ ಗ್ರಾಮಸ್ಥರನ್ನು ಮನವೊಲೀಸೋದಕ್ಕೆ ಸೂಲಿಬೆಲೆ ಠಾಣೆಯ ಪೊಲೀಸರು ಹರಸಾಹಸ ಪಡುತ್ತಿದ್ದಾರೆ.
‘ಭಾರತೀಯ ಮುಸ್ಲಿಮರನ್ನ ಪ್ರಚೋದಿಸುವ ಪ್ರಯತ್ನ’ : ರಾಮ ಮಂದಿರ ನಿರ್ಮಾಣಕ್ಕೆ ‘ಪಾಕ್’ ಖಂಡನೆ, ‘ಭಾರತ’ ತರಾಟೆ