ಬೆಂಗಳೂರು: ನಾಳೆ ಪಿಎಸ್ಐ ಮರುಪರೀಕ್ಷೆ ನಡೆಯಲಿದ್ದು, ಈ ನಡುವೆ ಅಭ್ಯರ್ಥಿಗಳಿಗೆ ನಿರ್ಭೀತಿಯಿಂದ ಪರೀಕ್ಷೆ ಬರೆಯುವಂತೆ ಶುಭ ಕೋರಿದ ಸಚಿವ ಪರಮೇಶ್ವರ್ ಅವರು ಶುಭಕೋರಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಗೃಹ ಸಚಿವ ಜಿ.ಪರಮೇಶ್ವರ್, ‘ನಾಳೆ ನಡೆಯಲಿರುವ ಪಿಎಸ್ಐ ಪರೀಕ್ಷೆಗೆ ಹಾಜರಾಗುತ್ತಿರುವ ಎಲ್ಲ ಅಭ್ಯರ್ಥಿಗಳಿಗೆ ಶುಭವಾಗಲಿ. ಪರೀಕ್ಷೆ ಹಿನ್ನೆಲೆಯಲ್ಲಿ ಅಗತ್ಯ ಮುಂಜಾಗ್ರತೆ ಕೈಗೊಳ್ಳಲಾಗಿದ್ದು, ಸುಸೂತ್ರವಾಗಿ ನಡೆಯಲಿದೆ. ಯಾವುದೇ ರೀತಿಯ ಆತಂಕವಿಲ್ಲದೇ ನಿರ್ಭೀತಿಯಿಂದ ಪರೀಕ್ಷೆ ಬರೆಯಿರಿ’ ಎಂದು ಶುಭ ಕೋರಿದ್ದಾರೆ.
ನಾಳೆ ನಡೆಯಲಿರುವ ಪಿಎಸ್ಐ ಪರೀಕ್ಷೆಗೆ ಹಾಜರಾಗುತ್ತಿರುವ ಎಲ್ಲ ಅಭ್ಯರ್ಥಿಗಳಿಗೆ ಶುಭವಾಗಲಿ. ಪರೀಕ್ಷೆ ಹಿನ್ನೆಲೆಯಲ್ಲಿ ಅಗತ್ಯ ಮುಂಜಾಗ್ರತೆ ಕೈಗೊಳ್ಳಲಾಗಿದ್ದು, ಸುಸೂತ್ರವಾಗಿ ನಡೆಯಲಿದೆ. ಯಾವುದೇ ರೀತಿಯ ಆತಂಕವಿಲ್ಲದೇ ನಿರ್ಭೀತಿಯಿಂದ ಪರೀಕ್ಷೆ ಬರೆಯಿರಿ.
— Dr. G Parameshwara (@DrParameshwara) January 22, 2024