ಬೊಮ್ಮನಹಳ್ಳಿ: ಕಾಂಗ್ರೆಸ್ನವರಿಗೆ ರಾಮನನ್ನು ಕಂಡರೆ ಆಗಲ್ಲವೆಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ವಿಷಾದ ವ್ಯಕ್ತಪಡಿಸಿದರು.ನರೇಂದ್ರ ಮೋದಿ ಹಾಗೂ ಶ್ರೀರಾಮ ಈರ್ವರನ್ನು ಕಂಡರೂ ಕಾಂಗ್ರೆಸ್ನವರಿಗೆ ಭಯ ಶುರುವಾಗಿದೆ ಎಂದು ತಿಳಿಸಿದರು.
ಇಂತಹ ಐತಿಹಾಸಿಕ ಕಾರ್ಯಕ್ರಮಕ್ಕೆ ರಜೆ ನೀಡದಕ್ಕೆ ಸಿದ್ದರಾಮಯ್ಯನವರಿಗೆ ಶ್ರೀರಾಮ ಒಳ್ಳೆಯ ಬುದ್ದಿ ಕೊಡಲಿ ಎಂದರು.ರೂಪೇನ ಅಗ್ರಹಾರದ ಶ್ರೀ ಲಕ್ಷ್ಮಿ ವೆಂಕಟೇಶ್ವರ ಸ್ವಾಮಿ ದೇವಸ್ಥಾನದ ಜೀರ್ಣೋದ್ದಾರ ಕುಂಬಾಭಿಷೇಕ ಮಹೋತ್ಸವದಲ್ಲಿ ಪಾಲ್ಗೊಂಡು ವಿಶೇಷ ಪೂಜೆ ಸಲ್ಲಿಸಿ ಮಾತನಾಡಿದರು.
ಕಾಂಗ್ರೆಸ್ ನವರಿಗೆ ಮೊದಲಿನಿಂದಲೂ ಪ್ರಧಾನಿ ಅವರನ್ನು ಕಂಡರೆ ಭಯವಿದ್ದೇ ಇದೆ ಎಂದರು.ಶಾಸಕ ಎಂ.ಸತೀಶ್ ರೆಡ್ಡಿ ಮಾತನಾಡಿ, ಜ.22 ಇತಿಹಾಸದ ಪುಟದಲ್ಲಿ ಅಳಿಸಲಾಗದ ಹೆಜ್ಜೆ ಗುರುತಾಗಲಿದೆ. ಪ್ರಧಾನಿ ಮೋದಿ ಅವರು ಪ್ರಪಂಚದೆಲ್ಲೆಡೆ ರಾಮನ ನೀತಿ, ತತ್ವ, ದಕ್ಷತೆ, ಪ್ರಾಮಾಣಿಕತೆಯನ್ನು ಪಸರಿಸಲು ಮುಂದಾಗಿದ್ದಾರೆ ಎಂದು ಹೇಳಿದರು.
ಬೆಂ.ದಕ್ಷಿಣ ಲೋಕಸಭಾ ಸಂಸದ ತೇಜಸ್ವಿ ಸೂರ್ಯ, ಯಲಹಂಕ ಶಾಸಕ ವಿಶ್ವನಾಥ ರೆಡ್ಡಿ, ವಿಧಾನ ಪರಿಷತ್ ಸದಸ್ಯರಾದ ಗೋಪಿನಾಥ್ ರೆಡ್ಡಿ, ದೇವಸ್ಥಾನದ ಜೀರ್ಣೋದ್ದಾರದ ಮುಖಂಡರಾದ ನರೇಂದ್ರ ಬಾಬು, ಬಿಜೆಪಿ ಮುಖಂಡರಾದ ಶ್ರೀನಿವಾಸ ರೆಡ್ಡಿ ಉಪಸ್ಥಿತರಿದ್ದರು.