ಬೆಂಗಳೂರು: ನಗರದ ಲಾಲ್ ಬಾಗ್ ನಲ್ಲಿ ( Lal Bag ) ಜನವರಿ.26ರ ಗಣರಾಜ್ಯೋತ್ಸವದ ಪ್ರಯುಕ್ತ ಫಲಪುಷ್ಪ ಪ್ರದರ್ಶನ ನಡೆಯಲಿದೆ. ಈ ಪ್ರದರ್ಶನ ವೀಕ್ಷಣೆಗೆ ತೆರಳೋರಿಗೆ ಅನುಕೂಲ ಕಲ್ಪಿಸೋ ನಿಟ್ಟಿನಲ್ಲಿ ನಮ್ಮ ಮೆಟ್ರೋದಿಂದ ( Namma Metro ) ರಿಟರ್ನ್ ಜರ್ನಿ ಪೇಪರ್ ಟಿಕೆಟ್ ( Paper Ticket ) ಪರಿಚಯಿಸಲಾಗುತ್ತಿದೆ.
ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಬೆಂಗಳೂರು ಮೆಟ್ರೋ ರೈಲು ನಿಗಮದ ನಿಯಮಿತದ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ, ಬೆಂಗಳೂರಿನ ಲಾಲ್‌ಬಾಗ್ ನಲ್ಲಿ ಏರ್ಪಡಿಸಲಾಗಿರುವ ಫಲಪುಷ್ಪ ಪ್ರದರ್ಶನಕ್ಕೆ ಬರುವ ಸಾರ್ವಜನಿಕರ ಅನುಕೂಲಕ್ಕಾಗಿ, ನಮ್ಮ ಮೆಟ್ರೋದಲ್ಲಿ ದಿನಾಂಕ 26.01.2024 ಶುಕ್ರವಾರದಂದು (ಗಣರಾಜ್ಯೋತ್ಸವ ದಿನ), ಲಾಲ್‌ಬಾಗ್ ಮೆಟ್ರೋ ನಿಲ್ದಾಣದಿಂದ ಯಾವುದೇ ಮೆಟ್ರೋ ನಿಲ್ದಾಣಕ್ಕೆ ಪ್ರಯಾಣಿಸಲು ರಿಟರ್ನ್ ಜರ್ನಿ ಪೇಪರ್ ಟಿಕೆಟ್‌ಗಳನ್ನು ಪರಿಚಯಿಸಿದೆ. ಸದರಿ ದಿನದಂದು ಬೆಳಗ್ಗೆ 10:00 ಗಂಟೆಯಿಂದ ರಾತ್ರಿ 08:00 ಗಂಟೆಯವರೆಗೆ ಲಾಲ್‌ಬಾಗ್ ಮೆಟ್ರೋ ನಿಲ್ದಾಣದಿಂದ ಯಾವುದೇ ಮೆಟ್ರೋ ನಿಲ್ದಾಣಕ್ಕೆ ಪ್ರಯಾಣಿಸಲು ಟಿಕೆಟ್ ದರವನ್ನು ರೂ.30/- ಕ್ಕೆ ನಿಗಧಿಪಡಿಸಲಾಗಿದೆ ಎಂದಿದ್ದಾರೆ.
ಈ ಪೇಪರ್ ಟಿಕೆಟ್ ಆ ದಿನದ ಒಂದು ಪ್ರಯಾಣಕ್ಕೆ ಮಾತ್ರ ಮಾನ್ಯವಾಗಿರುತ್ತದೆ ಹಾಗೂ ಬೆಳಗ್ಗೆ 8:00 ರಿಂದ ಸಂಜೆ 06:00 ಗಂಟೆಯವರೆಗೆ ಎಲ್ಲಾ ಮೆಟ್ರೋ ನಿಲ್ದಾಣಗಳಲ್ಲಿ ಖರೀದಿಸಬಹುದಾಗಿದೆ. ಲಾಲ್‌ಬಾಗ್ ಮೆಟ್ರೋ ನಿಲ್ದಾಣದಲ್ಲಿ ಪೇಪರ್ ಟಿಕೆಟ್ ರಾತ್ರಿ 08:00 ಗಂಟೆಯವರೆಗೆ ಲಭ್ಯವಿರುತ್ತದೆ ಎಂದು ಹೇಳಿದ್ದಾರೆ.
ಮೆಟ್ರೋ ಪ್ರಯಾಣಿಕರು ಲಾಲ್‌ಬಾಗ್ ನಿಲ್ದಾಣ ಪ್ರವೇಶಿಸಲು ಮತ್ತು ಯಾವುದೇ ನಿಲ್ದಾಣದಿಂದ ನಿರ್ಗಮಿಸಲು ಪೇಪರ್ ಟಿಕೆಟ್‌ಗಳನ್ನು ಹಾಜರಿಪಡಿಸಬೇಕಾಗುತ್ತದೆ.
ಆದಾಗ್ಯೂ, ಯಾವುದೇ ನಿಲ್ದಾಣದಿಂದ ಲಾಲ್‌ಬಾಗ್ ಮೆಟ್ರೋ ನಿಲ್ದಾಣಕ್ಕೆ ಟೋಕನ್, ಸ್ಮಾರ್ಟ್ ಕಾರ್ಡ್ NCMC ಕಾರ್ಡ್‌ಗಳು ಮತ್ತು ಕ್ಯೂಆರ್ ಟಿಕೆಟ್‌ಗಳ ಮೂಲಕ ಪ್ರಯಾಣಿಸಬಹುದು ಹಾಗೂ ಲಾಲ್‌ಬಾಗ್ ನಿಲ್ದಾಣದಿಂದ ಯಾವುದೇ ಮೆಟ್ರೋ ನಿಲ್ದಾಣಕ್ಕೆ ಹಿಂತಿರುಗಲು ಸ್ಮಾರ್ಟ್ ಕಾರ್ಡ್, NCMC ಕಾರ್ಡ್, QR ಟಿಕೆಟ್‌ಗಳ ಮೂಲಕ ಮತ್ತು ಟೋಕನ್‌ಗಳ ಬದಲಿಗೆ ಪೇಪರ್ ಟಿಕೆಟ್‌ಗಳ ಮೂಲಕ ಮಾತ್ರ ಪ್ರಯಾಣಿಸಬಹುದು.
BREAKING: ಫೆ.16ರಂದು ಮಂಡಿಸಲು ಉದ್ದೇಶಿಸಿರುವ ‘ರಾಜ್ಯ ಬಜೆಟ್’ ಮುಂದೂಡಿ: ರಾಜ್ಯಪಾಲರಿಗೆ ಬಿಜೆಪಿ ಮನವಿ
BREAKING: ಗದಗದಲ್ಲಿ ‘ಸರ್ಕಾರಿ ಬಸ್ ಹಾಗೂ ಲಾರಿ’ ನಡುವೆ ಭೀಕರ ಅಪಘಾತ: ಮೂವರು ಸಾವಿನ ಶಂಕೆ