ಬೆಂಗಳೂರು: ರಾಜ್ಯ ಸರ್ಕಾರದ ಸುಮಾರು 13,000 ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ಯೋಜನೆ ವ್ಯಾಪ್ತಿಗೆ ಒಳಪಡಿಸಿ ಆದೇಶ ಹೊರಡಿಸಲಾಗಿದೆ. ಈ ಮೂಲಕ ಸರ್ಕಾರಿ ನೌಕರರ ಬಹು ದಿನಗಳ ಬೇಡಿಕೆಯನ್ನು ಈಡೇರಿಸಲಾಗಿದೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ.
ಈ ಕುರಿತಂತೆ ಇಂದು ಎಕ್ಸ್ ಮಾಡಿರುವಂತ ಅವರು, 2006 ಏಪ್ರಿಲ್ ಪೂರ್ವ ನೇಮಕಾತಿ ಅಧಿಸೂಚನೆಯಾಗಿ 2006 ರ ನಂತರ ನೇಮಕಾತಿಗೊಂಡ ರಾಜ್ಯ ಸರ್ಕಾರದ ಸುಮಾರು 13,000 ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ಯೋಜನೆ ವ್ಯಾಪ್ತಿಗೆ ಒಳಪಡಿಸಿ ಆದೇಶ ಹೊರಡಿಸಲಾಗಿದೆ ಎಂದಿದ್ದಾರೆ.
ಚುನಾವಣೆಗೂ ಪೂರ್ವದಲ್ಲಿ ಎನ್.ಪಿ.ಎಸ್ ನೌಕರರು ಮುಷ್ಕರು ಮಾಡುವ ವೇಳೆ ಸ್ಥಳಕ್ಕೆ ಭೇಟಿನೀಡಿ ನಾವು ಅಧಿಕಾರಕ್ಕೆ ಬಂದ ನಂತರ ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದೆ, ಕೊಟ್ಟ ಮಾತಿನಂತೆ ಬೇಡಿಕೆ ಈಡೇರಿಸಿ ನುಡಿದಂತೆ ನಡೆದಿದ್ದೇನೆ ಎಂದು ಹೇಳಿದ್ದಾರೆ.
ಎಲ್ಲಾ 13,000 ಎನ್.ಪಿ.ಎಸ್ ನೌಕರರ ಕುಟುಂಬಗಳಿಗೆ ನಮ್ಮ ಈ ನಿರ್ಧಾರ ನೆಮ್ಮದಿ ನೀಡಿದೆ ಎಂದು ಭಾವಿಸಿದ್ದೇನೆ ಎಂದು ತಿಳಿಸಿದ್ದಾರೆ.
2006 ಏಪ್ರಿಲ್ ಪೂರ್ವ ನೇಮಕಾತಿ ಅಧಿಸೂಚನೆಯಾಗಿ 2006 ರ ನಂತರ ನೇಮಕಾತಿಗೊಂಡ ರಾಜ್ಯ ಸರ್ಕಾರದ ಸುಮಾರು 13,000 ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ಯೋಜನೆ ವ್ಯಾಪ್ತಿಗೆ ಒಳಪಡಿಸಿ ಆದೇಶ ಹೊರಡಿಸಲಾಗಿದೆ.
ಚುನಾವಣೆಗೂ ಪೂರ್ವದಲ್ಲಿ ಎನ್.ಪಿ.ಎಸ್ ನೌಕರರು ಮುಷ್ಕರು ಮಾಡುವ ವೇಳೆ ಸ್ಥಳಕ್ಕೆ ಭೇಟಿನೀಡಿ ನಾವು ಅಧಿಕಾರಕ್ಕೆ ಬಂದ ನಂತರ ಬೇಡಿಕೆ… pic.twitter.com/ZhRg9SJzx7— CM of Karnataka (@CMofKarnataka) January 24, 2024
BREAKING : WPL- 2024 ವೇಳಾಪಟ್ಟಿ ಪ್ರಕಟ : ಫೆ.23ರಿಂದ ಟೂರ್ನಿ ಆರಂಭ, ಬೆಂಗಳೂರು, ದೆಹಲಿ ಆತಿಥ್ಯ