ಬೆಂಗಳೂರು: ರಾಮನ ವಿಗ್ರಹ ಕೆತ್ತನೆಗೆ ನನಗೆ ಅವಕಾಶ ಸಿಕ್ಕಿದ್ದು ಪೂರ್ವ ಜನ್ಮದ ಪುಣ್ಯವಾಗಿದೆ. ಮೈಸೂರಿನ ಸಣ್ಣ ಹಳ್ಳಿಯಲ್ಲಿ ಸಿಕ್ಕ ಶಿಲೆ, ಈಗ ಅಯೋಧ್ಯೆಯ ರಾಮಮಂದಿರದಲ್ಲಿ ಅಲಂಕರಿಸಿರೋದು ನಮ್ಮ ಕರುನಾಡಿಗೆ ಸಿಕ್ಕ ಗೌರವ, ಹೆಮ್ಮಾಯಾಗಿದೆ ಅಂತ ಶಿಲ್ಪಿ ಅರುಣ್ ಯೋಗಿರಾಜ್ ತಿಳಿಸಿದ್ದಾರೆ.
ಇಂದು ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಿ, ಬೆಂಗಳೂರಿಗೆ ವಾಪಾಸ್ ಆದಂತ ಅವರನ್ನು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಿಜೆಪಿ ನಾಯಕರು, ರಾಮ ಭಕ್ತರು, ಅಭಿಮಾನಿಗಳು ಅದ್ಧೂರಿಯಾಗಿ ಸ್ವಾಗತಿಸಿದರು.
ಈ ಬಳಿಕ ಮಾತನಾಡಿದಂತ ಅವರು, ದೊಡ್ಡ ಅವಕಾಶ ಸಿಕ್ಕಿದ್ದಕ್ಕೆ ನಮ್ಮ ಮನೆತನ, ಗುರುಗಳಿಗೆ ಧನ್ಯವಾದಗಳು. ಇದು ಕಲೆಗೆ ಸಿಕ್ಕ ಗೌರವ ಎಂದು ಅನ್ನಿಸುತ್ತಿದೆ ಎಂದರು.
ಕಳೆದ 7 ತಿಂಗಳಿಂದ ಪರಿಶ್ರಮಪಟ್ಟು ವಿಗ್ರಹ ಕೆತ್ತನೆ ಮಾಡಿದ್ದೇನೆ. ಶ್ರೀರಾಮನೇ ಕೆತ್ತನೆ ಮಾಡಿಸಿಕೊಂಡಿದ್ದಾರೆ. ಶ್ರೀರಾಮಮಂದಿರಕ್ಕೆ 200 ಕೆಜಿ ಚಿನ್ನ ಕೊಡಲು ಭಕ್ತರು ಸಿದ್ಧರಿದ್ದಾರೆ. ಆದರೆ ಮೈಸೂರಿನ ಸಣ್ಣ ಗ್ರಾಮದ ರೈತನ ಜಮೀನಿನಲ್ಲಿ ಸಿಕ್ಕ ಶಿಲೆ ಆಯ್ಕೆಯಾಗಿದೆ. ಇದು ನಮ್ಮ ಕರುನಾಡಿಗೆ ಗೌರವ ಹಾಗೂ ಹೆಮ್ಮೆಯ ವಿಚಾರವಾಗಿದೆ ಎಂಬುದಾಗಿ ಸಂತಸ ವ್ಯಕ್ತಪಡಿಸಿದರು.
ರಾಮನ ವಿಗ್ರಹ ಕೆತ್ತನೆಗೆ ನನಗೆ ಅವಕಾಶ ಸಿಕ್ಕಿದ್ದು ಪೂರ್ವಜನ್ಮದ ಪುಣ್ಯ. ಸಣ್ಣ ಹಳ್ಳಿಯಿಂದ ಬಂದ ನನಗೆ ಉತ್ತಮ ಅವಕಾಶ ಸಿಕ್ಕಿದ್ದಕ್ಕೆ ಖುಷಿಯಿದೆ. ನನ್ನ ಕೆಲಸ ಇಷ್ಟವಾಗಿದ್ದಕ್ಕೆ ಎಲ್ಲರೂ ಅಭಿನಂದನೆ ಸಲ್ಲಿಸುತ್ತಿದ್ದಾರೆ. ಒಬ್ಬ ಶಿಲ್ಪಿಗೆ ಇದಕ್ಕಿಂತ ದೊಡ್ಡ ಉಡುಗೊರೆ ಮತ್ತೇನಿದೆ ಎಂಬುದಾಗಿ ಹರ್ಷ ವ್ಯಕ್ತಪಡಿಸಿದರು.
BREAKING: ‘ರಾಜ್ಯ ಸರ್ಕಾರ’ದಿಂದ ‘ಹಳೇ ಪಿಂಚಣಿ ಯೋಜನೆ(OPS)’ ಜಾರಿಗೊಳಿಸಿ ಅಧಿಕೃತ ಆದೇಶ ಪ್ರಕಟ