ಬೆಂಗಳೂರು : ಬಿಜೆಪಿ ಪಕ್ಷವನ್ನು ತೊರೆದು ಬೇರೆ ಬೇರೆ ಪಕ್ಷಗಳಿಗೆ ತೆರಳಿರುವ ನಾಯಕರು ಹಾಗೂ ಮುಖಂಡರನ್ನು ಮತ್ತೆ ಪಕ್ಷಕ್ಕೆ ಕರೆತರುವ ವಿಚಾರವಾಗಿ ಹೈಕಮಾಂಡ್ ನಿರ್ಧರಿಸುತ್ತದೆ. ಲೋಕಸಭಾ ಚುನಾವಣೆಯನ್ನು ಒಟ್ಟಾಗಿ ಒಟ್ಟಾಗಿ ಎದುರಿಸುತ್ತೇವೆ ಎಂದು ರಾಜ್ಯ ಬಿಜೆಪಿ ಘಟಕದ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ತಿಳಿಸಿದರು.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶೆಟ್ಟರ್ ಸೇರಿ ಪಕ್ಷ ಬಿಟ್ಟವರನ್ನು ಮರಳಿ ಪಕ್ಷಕ್ಕೆ ಕರೆದಿರುವ ವಿಚಾರವಾಗಿ ಬೆಂಗಳೂರಿನಲ್ಲಿ ಶಾಸಕ ಅನಿಲ್ ಕುಮಾರ್ ಪ್ರತಿಕ್ರಿಯೆ ನೀಡಿದ್ದು, ಪಕ್ಷ ಬಿಟ್ಟು ಹೋದವರನ್ನು ವಾಪಸ್ ಕರೆ ತರುವ ಕೆಲಸ ಮಾಡುತ್ತೇವೆ ಎಂದು ತಿಳಿಸಿದರು.
ಜಗದೀಶ್ ಶೆಟ್ಟರ್ ಜೊತೆ ಹೈಕಮಾಂಡ್ ನಾಯಕರು ಮಾತನಾಡುತ್ತಾರೆ. ಚುನಾವಣೆಯಲ್ಲಿ ಗೆಲ್ಲುವ ದೃಷ್ಟಿಯಿಂದ ಕರೆತರುವ ಕೆಲಸವನ್ನು ಮಾಡುತ್ತೇವೆ. ಎಲ್ಲರನ್ನೂ ಕರೆತಂದು ಒಟ್ಟಾಗಿ ಹೋಗುವ ಕೆಲಸ ಮಾಡುತ್ತೇವೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಹೇಳಿದರು