ಮೈಸೂರು : ನಿಗಮ ಮಂಡಳಿ ನೇಮಕ ವಿಚಾರಕ್ಕೆ ಸಂಬಂಧಿಸಿದಂತೆ ಸದ್ಯ ಕಾಂಗ್ರೆಸ್ ನಲ್ಲಿ ಗೊಂದಲ ನಿವಾರಣೆ ಯಾಗುವ ಲಕ್ಷಣ ಕಾಣಿಸುತ್ತಿಲ್ಲ. ಈ ವಿಚಾರವಾಗಿ ಸಿಎಂ ಹಾಗೂ ಡಿಸಿಎಂ ನಡುವೆ ಜಟಾಪಟಿ ಏರ್ಪಟ್ಟಿದ್ದು, ಕಾಂಗ್ರೆಸ್ ಹೈಕಮಾಂಡ್ ನಿಗಮ ಮಂಡಳಿ ಪಟ್ಟಿಯನ್ನು ಬಿಡುಗಡೆ ಮಾಡುವುದಕ್ಕೆ ವಿಳಂಬ ನೀತಿ ಅನುಸರಿಸುತ್ತಿದ್ದಾರೆ ಎಂದು ತಿಳಿಬಂದಿದೆ.
ಹೈಕಮಾಂಡ್ ಅವರ ಈ ಒಂದು ನಡೆಯಿಂದ ಸಿಎಂ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಇಡೀ ಸಿಎಂ ಡಿಕೆ ಶಿವಕುಮಾರ್ ಬೇಸರ ವ್ಯಕ್ತಪಡಿಸಿದ್ದಾರೆ.ಹೈಕಮಾಂಡ್ ಒಪ್ಪಿಗೆ ನೀಡಿದ ಕೂಡಲೇ ನಿಗಮ ಮಂಡಳಿ ಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತದೆ. ನಿಗಮ ಮಂಡಳಿ ಅಧ್ಯಕ್ಷ ಉಪಾಧ್ಯಕ್ಷ ಪಟ್ಟಿ ವರಿಷ್ಠರಿಗೆ ಕಳುಹಿಸಿದ್ದೇವೆ ಹೈಕಮಾಂಡ್ ಒಪ್ಪಿಗೆ ಸೂಚಿಸಿದ ಕೂಡಲೇ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದು ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಇನ್ನು ಎಂಎಲ್ಸಿ ಜಗದೀಶ್ ಶೆಟ್ಟರ್ ಬಿಜೆಪಿಗೆ ಮರಳುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಜಗದೀಶ್ ಶೆಟ್ಟರ್ ಮತ್ತೆ ಬಿಜೆಪಿಗೆ ಹೋಗುತ್ತಾರೆ ಎಂಬ ವಿಚಾರ ಬಿಜೆಪಿಗೆ ಹೋಗುವುದಿಲ್ಲ ಎಂದು ಈಗಾಗಲೇ ಜಗದೀಶ್ ಶೆಟ್ಟರ್ ಅವರು ಸ್ಪಷ್ಟಪಡಿಸಿದ್ದಾರೆ ಎಂದು ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ರಾಮಮಂದಿರ ವಿಚಾರ ಎಂಪಿ ಚುನಾವಣೆಯಲ್ಲಿ ಬಿಜೆಪಿಗೆ ಲಾಭ ವಿಚಾರವಾಗಿ ಮಾತನಾಡಿದ ಅವರು, ಮಂದಿರ ಪೂರ್ಣಗೊಳ್ಳದಿದ್ದರೂ ಕೂಡ ಆತುರವಾಗಿ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿದೆ ಏನೇ ರಾಜಕೀಯ ಮಾಡಿದರು ಕೂಡ ಬಿಜೆಪಿಯವರಿಗೆ ಯಾವುದೇ ರೀತಿಯಾಗಿ ಲಾಭ ಸಿಗುವುದಿಲ್ಲ. ನಮ್ಮ ದೇಶದ ಜನತೆ ಜಾತ್ಯತೀತದ ತತ್ವದ ಮೇಲೆ ನಂಬಿಕೆ ಇಟ್ಟಿದ್ದಾರೆ ಎಂದು ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.