ಬೆಂಗಳೂರು : ಇನ್ನೇನು ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜ್ಯದಲ್ಲಿ ಎಲ್ಲ ಪಕ್ಷಗಳು ಭರ್ಜರಿ ಸಿದ್ಧತೆ ಮಾಡಿಕೊಳ್ಳುತ್ತಿವೆ ಈ ಹಿನ್ನೆಲೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡಿದ್ದು, ಕರ್ನಾಟಕದಲ್ಲಿ ಯಾವ ಕ್ಷೇತ್ರಗಳಿಗೆ ಯಾವ ಅಭ್ಯರ್ಥಿ ಕಣಕ್ಕೆ ಇಳಿಸಬೇಕೆಂಬುದು ಇನ್ನೇನು ಅಂತಿಮವಾಗಲಿದೆ.
ಈ ಒಂದು ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಮಂಡ್ಯ ಜಿಲ್ಲೆಗೆ ಯಾವ ಅಭ್ಯರ್ಥಿಯನ್ನು ಸ್ಪರ್ಧೆಗೆ ಇಳಿಸಬೇಕೆಂಬ ಎಂಬುದರ ಕುರಿತಾಗಿ ಬೆಂಗಳೂರಿನಲ್ಲಿ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಮಾತನಾಡಿದ್ದು, ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸಬೇಕೆಂಬ ಒತ್ತಾಯವಿದೆ. ಕುಮಾರಸ್ವಾಮಿ ಅವರು ಒಪ್ಪಿದರೆ ನಿಖಿಲ್ ಅವರು ಮಂಡ್ಯದಲ್ಲಿ ಸ್ಪರ್ಧಿಸುತ್ತಾರೆ.ನಿಖಿಲ್ ಸ್ಪರ್ಧೆ ಕುರಿತು ಎಚ್ ಡಿ ಕುಮಾರಸ್ವಾಮಿ ತೀರ್ಮಾನಿಸಬೇಕು ಎಂದು ಬೆಂಗಳೂರಿನಲ್ಲಿ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ತಿಳಿಸಿದರು.
ಎಚ್ ಡಿ ಕುಮಾರಸ್ವಾಮಿ ಮಂಡ್ಯದಿಂದ ಸ್ಪರ್ಧಿಸುವ ವದಂತಿ ಕೇಳಿಬಂದಿದ್ದು ಈ ವಿಷಯದ ಕುರಿತಾಗಿ ಬೆಂಗಳೂರಿನಲ್ಲಿ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಮಾತನಾಡಿದ್ದು ಪ್ರಧಾನಿ ಮೋದಿಯವರು ಏನು ಹೇಳುತ್ತಾರೋ ಗೊತ್ತಿಲ್ಲ. ಪ್ರಧಾನಿ ಗೆಲ್ಲಬೇಕು ಅಂದರೆ ಯಾವುದಾದರೂ ಕ್ಷೇತ್ರ ಕೂಡ ಆಗಬಹುದು. ಮಂಡ್ಯ ಕ್ಷೇತ್ರವು ಆಗಬಹುದು, ತುಮಕೂರು ಆಗಬಹುದು ಎಂದು ಅವರು ತಿಳಿಸಿದರು.ಇದನ್ನು ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ಅವರು ತೀರ್ಮಾನಿಸುತ್ತಾರೆ. ಆದರೆ ಇದುವರೆಗೂ ಆ ಥರ ಯಾವುದೇ ರೀತಿಯಾಗಿ ಮಾತುಕತೆ ಆಗಿಲ್ಲ. ಎಂದು ಬೆಂಗಳೂರಿನಲ್ಲಿ ದೇವೇಗೌಡ ತಿಳಿಸಿದರು.