ಬೆಂಗಳೂರು : ಲೋಕಸಭೆ ಚುನಾವಣೆ ಅಷ್ಟೆ ಅಲ್ಲ ವಿಧಾನಸಭಾ ಚುನಾವಣೆ ಇದ್ದರೂ ಕೂಡ ರಾಜಕಾರಣಿಗಳು ಪಕ್ಷದಿಂದ ಪಕ್ಷಕ್ಕೆ ತೆರಳುವ ಪಕ್ಷಾಂತರ ಪರ್ವ ಸಹಜವಾದದ್ದು, ಅದರಂತೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಹಿರಿಯ ನಾಯಕ ಜಗದೀಶ್ ಶೆಟ್ಟರ್ ಹಾಗೂ ಲಕ್ಷ್ಮಣ ಸವದಿ ಕಾಂಗ್ರೆಸ್ ಪಕ್ಷಕ್ಕೆ ಬಂದಿದ್ದರು.
ಇದೀಗ ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಮತ್ತೆ ಅವರನ್ನು ಸ್ವಪಕ್ಷಕ್ಕೆ ಕರೆತರುವ ಪ್ರಯತ್ನ ನಡೆಯುತ್ತಿದ್ದು ಇದೀಗ ಅಮಿತ್ ಶಾ ಜೊತೆ ಜಗದೀಶ್ ಶೆಟ್ಟರ್ ಮಾತುಕತೆ ನಡೆಸಿದ್ದು ಮತ್ತೆ ಬಿಜೆಪಿಗೆ ಮರಳಿದ್ದಾರೆ ಎಂಬ ಸುದ್ದಿ ತಿಳಿದು ಬಂದಿದೆ.ಬಿಜೆಪಿ ಪಕ್ಷಕ್ಕೆ ಮರು ಸೇರ್ಪಡೆಗೆ ಶೆಟ್ಟರ್ ಒಪ್ಪಿಗೆ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.
ಕೆಲವೇ ಕ್ಷಣಗಳಲ್ಲಿ ಬಿಜೆಪಿ ಸೇರ್ಪಡೆ ಕುರಿತು ಜಗದೀಶ್ ಶೆಟ್ಟರ್ ಈ ಕುರಿತು ಘೋಷಣೆ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ ಶೆಟ್ಟರ್ ಬಿಜೆಪಿ ಮರು ಸೇರ್ಪಡೆಗೆ ಇದೀಗ ಕೌಂಟ್ ಡೌನ್ ಶುರುವಾಗಿದೆ. ಜಗದೀಶಟರ್ ಬಿಜೆಪಿ ಮರು ಸೇರ್ಪಡೆ ಫಿಕ್ಸ್ ಆದಂತಿದೆ.ರಾಜ್ಯ ಬಿಜೆಪಿ ವರಿಷ್ಠರಿಗೆ ಅಮಿತ್ ಶಾ ಜೊತೆ ಜಗದೀಶ್ ಶೆಟ್ಟರ್ ಮಾತುಕತೆ ನಡೆಸುವಂತಹ ಪ್ರಮುಖವಾದಂತಹ ಜವಾಬ್ದಾರಿ ನೀಡಿದರು.
ಈ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ವರಿಷ್ಠರು ಇದರಲ್ಲಿ ಯಶಸ್ವಿಯಾಗಿದ್ದು ಜಗದೀಶ್ ಶೆಟ್ಟರ್ ಅವರ ಅಮಿತ್ ಶಾ ಜೊತೆ ಮಾತನಾಡಿದ್ದು ಇಂದು ಸಂಜೆಯ ಒಳಗೆ ಬಿಜೆಪಿಗೆ ಜಗದೀಶ್ ಶೆಟ್ಟರ್ ಸೇರುತ್ತಾರ ಎಂಬುವುದರ ಕುರಿತು ಅಧಿಕೃತವಾಗಿ ಮಾಹಿತಿ ಹೊರಬೀಳಲಿದೆ ಎಂದು ತಿಳಿದು ಬಂದಿದೆ.