ಬೆಂಗಳೂರು: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕೈ ತೊರೆದು ಮತ್ತೆ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಈ ಬೆನ್ನಲ್ಲೇ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಕೂಡ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂಬುದಾಗಿ ಚರ್ಚೆ ನಡೆಯುತ್ತಿತ್ತು. ಇದಕ್ಕೆ ವ್ಯತಿರಿಕ್ತ ಎನ್ನುವಂತೆ ಇಂದು ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಸವದಿ ಭೇಟಿಯಾಗಿದ್ದಾರೆ.
ಈ ಕುರಿತಂತೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಪೋಟೋ ಹಂಚಿಕೊಂಡಿದ್ದು, ಮಾಜಿ ಡಿಸಿಎಂ, ಶಾಸಕ ಲಕ್ಷ್ಮಣ್ ಸವದಿ ಅವರು ಬೆಂಗಳೂರಿನಲ್ಲಿ ಗುರುವಾರ ಭೇಟಿ ಮಾಡಿ ಸಮಾಲೋಚನೆ ನಡೆಸಿದರು ಎಂದು ತಿಳಿಸಿದ್ದಾರೆ. ಈ ಮೂಲಕ ಮತ್ತೆ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂಬ ವದಂತಿಗಳಿಗೆ ಬ್ರೇಕ್ ಹಾಕಿದ್ದಾರೆ.
ನಾನು ಯಾವುದೇ ಕಾಣಕ್ಕೂ ‘ಮತ್ತೆ ಬಿಜೆಪಿ ಸೇರಲ್ಲ’ – ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಸ್ಪಷ್ಟನೆ
ಬೆಂಗಳೂರು; ವಿಧಾನಸಭಾ ಚುನಾವಣೆ ( Karnataka Assembly Election ) ಸಂದರ್ಭದಲ್ಲಿ ಬಿಜೆಪಿ ತೊರೆದು, ಕಾಂಗ್ರೆಸ್ ಪಕ್ಷ (Congress Party ) ಸೇರಿದ್ದಂತ ಜಗದೀಶ್ ಶೆಟ್ಟರ್ ಮತ್ತೆ ಘರ್ ವಾಪಸ್ ಆಗಿದ್ದಾರೆ. ಈ ಬೆನ್ನಲ್ಲೇ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ( Lakshman Savadi ) ಕೂಡ ಬಿಜೆಪಿ ಸೇರಲಿದ್ದಾರೆ ಎನ್ನಲಾಗಿತ್ತು. ಆ ಬಗ್ಗೆ ಅವರು ಹೇಳಿದ್ದೇನು ಅಂತ ಮುಂದೆ ಓದಿ.
ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದಂತ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಅವರು, ನಾನು ಯಾವುದೇ ಕಾರಣಕ್ಕೂ ಮತ್ತೆ ಬಿಜೆಪಿ ಸೇರ್ಪಡೆ ಆಗೋದಿಲ್ಲ. ಆ ಪ್ರಶ್ನೆಯೇ ಇಲ್ಲ ಅಂತ ಸ್ಪಷ್ಟಪಡಿಸಿದರು.
ನನಗೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಪಕ್ಷ ಬಿಟ್ಟು, ಬಿಜೆಪಿಗೆ ಮತ್ತೆ ಯಾಕೆ ಹೋದ್ರು ಅಂತ ಗೊತ್ತಿಲ್ಲ. ಆದ್ರೇ ನಾನಂತೂ ಮತ್ತೆ ಬಿಜೆಪಿಗೆ ಹೋಗೋದಿಲ್ಲ. ಹೋಗೋ ಪ್ರಶ್ನೆಯೂ ಇಲ್ಲ ಎಂಬುದಾಗಿ ತಿಳಿಸಿದರು.
ಜಗದೀಶ್ ಶೆಟ್ಟರ್ ಅವರು ರಾಜೀನಾಮೆ ನೀಡಿರೋದು ಅವರ ವೈಯಕ್ತಿಕ ವಿಚಾರವಾಗಿದೆ. ನಾನು ಆ ಬಗ್ಗೆ ಮಾತಾಡೋದಿಲ್ಲ. ಜಗದೀಶ್ ಶೆಟ್ಟರ್ ಕಾಂಗ್ರೆಸ್ ಬಿಟ್ಟು, ಬಿಜೆಪಿಗೆ ಸೇರಿದ್ದು ಪಕ್ಷಕ್ಕೆ ಯಾವುದೇ ಡ್ಯಾಮೇಜ್ ಆಗೋದಿಲ್ಲ ಎಂದರು.
ಶೆಟ್ಟರ್ ಬಿಜೆಪಿಗೆ ಮರು ಸೇರ್ಪಡೆ ವಿಚಾರ : ಹೈಕಮಾಂಡ್ ತೀರ್ಮಾನವನ್ನ ಸ್ವಾಗತಿಸುತ್ತೇನೆ : ಶಾಸಕ ಮಹೇಶ್ ಟೆಂಗಿನಕಾಯಿ