ಬೆಂಗಳೂರು: ನಮ್ಮೆಲ್ಲ ಕಾರ್ಯಕರ್ತರ ಅಪೇಕ್ಷೆಯಂತೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರ ಬಿಜೆಪಿ ಮರುಸೇರ್ಪಡೆ ಆಗಿದೆ ಎಂದು ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದರು.
ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರ ಉಪಸ್ಥಿತಿಯಲ್ಲಿ ದೆಹಲಿಯಲ್ಲಿ ಇಂದು ನಡೆದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರ ಬಿಜೆಪಿ ಮರುಸೇರ್ಪಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಜಗದೀಶ್ ಶೆಟ್ಟರ್ ಅವರು ಪಕ್ಷದ ಅನೇಕ ಜವಾಬ್ದಾರಿ ವಹಿಸಿದವರು. ಮುಖ್ಯಮಂತ್ರಿಯಾಗಿ ಅವರು ದುಡಿದಿದ್ದಾರೆ. ಅವರು ಬಿಜೆಪಿಗೆ ಬರಬೇಕೆಂದು ನಮ್ಮೆಲ್ಲ ಕಾರ್ಯಕರ್ತರ ಅಪೇಕ್ಷೆ ಇತ್ತು. ಅದಕ್ಕಾಗಿ ಇವತ್ತು ಪಕ್ಷದ ಹಿರಿಯ ನಾಯಕ ಅಮಿತ್ ಶಾ ಅವರನ್ನು ನಾನು, ಜಗದೀಶ್ ಶೆಟ್ಟರ್, ವಿಜಯೇಂದ್ರ ಸೇರಿ ಎಲ್ಲರೂ ಭೇಟಿ ಮಾಡಿ, ಅವರು ಸಹ ಸಂತೋಷದಿಂದ ಬಿಜೆಪಿ ಸೇರಲು ಕೋರಿದರು. ಅದರಂತೆ ಇವತ್ತು ಬಿಜೆಪಿ ಸೇರಿದ್ದಾರೆ. ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನೂ ಭೇಟಿ ಮಾಡುತ್ತೇವೆ ಎಂದು ವಿವರಿಸಿದರು.
ಶೆಟ್ಟರ್ ಸೇರ್ಪಡೆಯಿಂದ ಬಿಜೆಪಿಗೆ ಹೆಚ್ಚು ಶಕ್ತಿ ಬಂದಿದೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ 28ರಲ್ಲಿ 25ಕ್ಕೂ ಹೆಚ್ಚು ಸ್ಥಾನಗಳನ್ನು ಬಿಜೆಪಿ ಗೆಲ್ಲಲಿದೆ ಎಂದು ತಿಳಿಸಿದರು.
BIG NEWS: ‘ಲಕ್ಷ್ಮಣ್ ಸವದಿ’ ಬಿಜೆಪಿ ಸೇರ್ಪಡೆ ಚರ್ಚೆಯ ಬೆನ್ನಲ್ಲೇ ‘ಡಿಸಿಎಂ ಡಿಕೆ ಶಿವಕುಮಾರ್’ ಭೇಟಿ