ಬೆಂಗಳೂರು: ಸ್ವತಂತ್ರ ಅಭ್ಯರ್ಥಿಯಾಗಿ ನಿಂತು ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸಂಸದೆ ಸುಮಲತಾ ಅಂಬರೀಶ್ ಗೆಲುವು ಸಾಧಿಸಿದ್ದರು. ಆದ್ರೇ ಮುಂಬರುವಂತ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದಿಂದ ಸ್ಪರ್ಧಿಸೋ ಸುಳಿವನ್ನು ನೀಡಿದ್ದಾರೆ. ಈ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಬಿಗ್ ಶಾಕ್ ನೀಡಿದ್ದಾರೆ.
ಈಗಾಗಲೇ ಸಂಸದೆ ಸುಮಲತಾ ಅಂಬರೀಶ್ ಜೊತೆಗೆ ಬಿಜೆಪಿ ರಾಜ್ಯ, ರಾಷ್ಟ್ರೀಯ ನಾಯಕರು ಚರ್ಚಿಸಿದ್ದಾರೆ ಎನ್ನಲಾಗಿದೆ. ಬಿಜೆಪಿ ವರಿಷ್ಠರ ಮಾತಿಗೆ ಸುಮಲತಾ ಒಪ್ಪಿಗೆ ಕೂಡ ಸೂಚಿಸಿದ್ದಾರೆ ಎನ್ನಲಾಗುತ್ತಿದೆ. ಜೊತೆಗೆ ಬಿಜೆಪಿಯಿಂದ ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಸುಮಲತಾ ಅಂಬರೀಶ್ ಅವರಿಗೆ ಟಿಕೆಟ್ ಘೋಷಣೆಯಾಗಲಿದೆ ಎಂದು ಬಿಜೆಪಿ ಉನ್ನತ ಮೂಲಗಳಿಂದ ತಿಳಿದು ಬಂದಿದೆ.
ಈ ನಡುವೆ ಸುದ್ದಿಗಾರರೊಂದಿಗೆ ಇಂದು ಮಾತನಾಡಿದಂತ ಸಂಸದೆ ಸುಮಲತಾ ಅಂಬರೀಶ್ ಅವರು, ಈವರೆಗೆ ಎಲ್ಲಿಯೂ ನನ್ನ ಬಗ್ಗೆ ಕಳಂಕವಾಗಲೀ, ಕಪ್ಪು ಚುಕ್ಕೆಯಾಗಲೀ ಇಲ್ಲ. ಪಾರ್ಲಿಮೆಂಟ್ ನಲ್ಲಿ ಮಾತನಾಡಿರುವುದು ಎಲ್ಲಿರೂ ಗೊತ್ತಿದೆ. ಮಂಡ್ಯ ಸೀಟು ಬಿಜೆಪಿನೇ ಉಳಿಸಿಕೊಳ್ಳುತ್ತಿದೆ ಅನ್ನಿಸುತ್ತೆ ಎಂದು ಹೇಳುವ ಮೂಲಕ, ಬಿಜೆಪಿಯಿಂದ ಸ್ಪರ್ಧೆ ಮಾಡುವ ಇಂಗಿತವನ್ನು ವ್ಯಕ್ತ ಪಡಿಸಿದ್ದಾರೆ.
ಇದೇ ಸಂದರ್ಭದಲ್ಲಿ ನಾನು ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸೋ ಪ್ರಯತ್ನ ಮಾಡಿಲ್ಲ. ನನ್ನ ಬೆಂಬಲಿಗರಲ್ಲಿ ಸುಮಾರು ಜನರು ಕಾಂಗ್ರೆಸ್ ಕಾರ್ಯಕರ್ತರಿದ್ದಾರೆ. ಅವರು ಕಾಂಗ್ರೆಸ್ ಗೆ ಬನ್ನಿ ಎಂದು ಹೇಳುತ್ತಿ್ದದಾರೆ. ಆದರೆ ನನಗೊಂದು ಕಮಿಟ್ಮೆಂಟ್ ಇದೆ. ಮೋದಿ ನೇತೃತ್ವ ಕರೆಕ್ಟ್ ಅನ್ನಿಸುತ್ತಿದೆ ಎಂದು ಹೇಳಿದರು. ಈ ಮೂಲಕ ಬಿಜೆಪಿಯಿಂದ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸೋದನ್ನು ಖಚಿತ ಪಡಿಸಿದರು.
ರಾಜ್ಯ ಸರ್ಕಾರದಿಂದ OPS ಹೆಸರಿನಲ್ಲಿ ನೌಕರರಿಗೆ ‘ಮಕ್ಮಲ್ ಟೋಪಿ’ : ಮಾಜಿ ಸಿಎಂ ಹೆಚ್‌ಡಿಕೆ ಆಕ್ರೋಶ