ಜೈಪುರ : ಭಾರತಕ್ಕೆ ಎರಡು ದಿನಗಳ ರಾಜ್ಯ ಪ್ರವಾಸದ ಭಾಗವಾಗಿ ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಗುರುವಾರ ಜೈಪುರ ತಲುಪಿದರು. ರಾಜಸ್ಥಾನದ ರಾಜ್ಯಪಾಲ ಕಲ್ರಾಜ್ ಮಿಶ್ರಾ ಮತ್ತು ಸಿಎಂ ಭಜನ್ಲಾಲ್ ಶರ್ಮಾ ಮತ್ತು ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರನ್ನ ಸ್ವಾಗತಿಸಿದರು. ಮ್ಯಾಕ್ರನ್ ಅವರು ಈ ವರ್ಷದ ಗಣರಾಜ್ಯೋತ್ಸವದ (ಗಣರಾಜ್ಯೋತ್ಸವ 2024) ಪರೇಡ್‌ನ ಮುಖ್ಯ ಅತಿಥಿಯಾಗಿದ್ದಾರೆ. ಇನ್ನು ಭಾರತ ಮತ್ತು ಫ್ರಾನ್ಸ್ ನಡುವಿನ ಸಂಬಂಧವನ್ನ ಮತ್ತಷ್ಟು ಬಲಪಡಿಸಲು ಮ್ಯಾಕ್ರನ್ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮಾತನಾಡಲಿದ್ದಾರೆ. ಇದಿಷ್ಟೇ ಅಲ್ಲ, ಸಧ್ಯ ರಾಜಸ್ಥಾನದ ರಾಜಧಾನಿ ಜೈಪುರದಲ್ಲಿ ರೋಡ್ ಶೋ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಫ್ರಾನ್ಸ್ ಅಧ್ಯಕ್ಷರು ಜೈಪುರದ ವಿವಿಧ ಸ್ಥಳಗಳಿಗೆ ಭೇಟಿ ನೀಡಿದರು.
ರಾಜ್ಯ ಸರ್ಕಾರದಿಂದ OPS ಹೆಸರಿನಲ್ಲಿ ನೌಕರರಿಗೆ ‘ಮಕ್ಮಲ್ ಟೋಪಿ’ : ಮಾಜಿ ಸಿಎಂ ಹೆಚ್‌ಡಿಕೆ ಆಕ್ರೋಶ
BIG NEWS: ರಾಜ್ಯದಲ್ಲಿ ‘ಸೈಬರ್ ಕ್ರೈಂ’ ತಡೆಗೆ ಮಹತ್ವದ ಕ್ರಮ: ಎಲ್ಲಾ ಪೊಲೀಸರಿಗೂ ‘ವಿಶೇಷ ತರಬೇತಿ’- ಅಲೋಕ್ ಮೋಹನ್