ಬೆಂಗಳೂರು: ಕರ್ನಾಟಕ ಬಜೆಟ್ ಅನ್ನು ಮಂಡಿಸೋದಕ್ಕೆ ಬಜೆಟ್ ಅಧಿವೇಶನ ಆರಂಭಕ್ಕೆ ಈಗ ಮುಹೂರ್ತ ಫಿಕ್ಸ್ ಆಗಿದೆ. ಫೆಬ್ರವರಿ.12ರಂದು ಜಂಟಿ ಸದನವನ್ನು ಉದ್ದೇಶಿಸಿ ರಾಜ್ಯಪಾಲರ ಭಾಷಣದ ಬಳಿಕ ಬಜೆಟ್ ಅಧಿವೇಶನ ಆರಂಭಗೊಳ್ಳಲಿದೆ.
ಈ ಕುರಿತಂತೆ ಕರ್ನಾಟಕ ವಿಧಾನಸಭೆಯ ಕಾರ್ಯದರ್ಶಿ ಎಂ.ಕೆ ವಿಶಾಲಾಕ್ಷಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಹದಿಮೂರನೇ ವಿಧಾನಸಭೆಯ ಮೂರನೇ ಅಧಿವೇಶನವು ದಿನಾಂಕ 12-02-2024ರಂದು ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನ ವಿಧಾನಸೌಧದಲ್ಲಿರುವ ವಿಧಾನಸಭೆಯ ಸಭಾಂಗಣದಲ್ಲಿ ಸಮಾವೇಶಗೊಳ್ಳಲಿದೆ ಎಂದಿದ್ದಾರೆ.
ಫೆಬ್ರವರಿ.12ರಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ವಿಧಾನಮಂಡಲದ ಉಭಯ ಸನದಗಳ ಸದಸ್ಯರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ ಎಂಬುದಾಗಿ ತಿಳಿಸಿದ್ದಾರೆ.
ಇನ್ನೂ ರಾಜ್ಯಪಾಲರ ಭಾಷಣದ ಬಳಿಕ ಫೆಬ್ರವರಿ.16ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ತಮ್ಮ ಚೊಚ್ಚಲ ರಾಜ್ಯ ಬಜೆಟ್ 2024-25 ಅನ್ನು ಮಂಡಿಸಲಿದ್ದಾರೆ. ಈ ಮೂಲಕ ಕರ್ನಾಟಕ ಬಜೆಟ್ ಮಂಡನೆಗೆ ಮುಹೂರ್ತ ಫಿಕ್ಸ್ ಆದಂತೆ ಆಗಿದೆ.
ರಾಜ್ಯ ಸರ್ಕಾರದಿಂದ OPS ಹೆಸರಿನಲ್ಲಿ ನೌಕರರಿಗೆ ‘ಮಕ್ಮಲ್ ಟೋಪಿ’ : ಮಾಜಿ ಸಿಎಂ ಹೆಚ್‌ಡಿಕೆ ಆಕ್ರೋಶ