ಬೆಂಗಳೂರು: ನಾಳೆ ಗಣರಾಜ್ಯೋತ್ಸವವನ್ನು ದೇಶದೆಲ್ಲೆಡೆ ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಕರ್ನಾಟಕದಲ್ಲಿ ಗಣರಾಜ್ಯೋತ್ಸವ ಸಮಾರಂಭಗಳಲ್ಲಿ ಡಾ.ಬಿಆರ್ ಅಂಬೇಡ್ಕರ್ ಪೋಟೋ ಇಡೋದು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ.
ಈ ಕುರಿತಂತೆ ರಾಜ್ಯ ಶಿಷ್ಟಾಚಾರದ ಸರ್ಕಾರದ ಅಧೀನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು, ಜನವರಿ.26ರಂದು ರಾಜ್ಯದ ಸರ್ಕಾರಿ ಕಚೇರಿಗಳು, ಸರ್ಕಾರಿ ಸ್ವಾಮ್ಯಕ್ಕೆ ಒಳಪಡುವ ಸಂಸ್ಥೆಗಳು ಹಾಗೂ ಸರ್ಕಾರಿ ಶಾಲಾ ಕಾಲೇಜುಗಳು ಸೇರಿದಂತೆ ಸರ್ಕಾರದ ವತಿಯಿಂದ ನಡೆಯುವ ಎಲ್ಲಾ ಗಣರಾಜ್ಯೋತ್ಸವ ಸಮಾರಂಭಗಳಲ್ಲಿ ಸಂವಿಧಾನದ ಪಿತಾಮಹ, ಭಾರತ ರತ್ನ ಡಾ.ಬಿಆರ್ ಅಂಬೇಡ್ಕರ್ ಭಾವಚಿತ್ರವನ್ನು ಕಡ್ಡಾಯವಾಗಿ ಇಡುವಂತೆ ಸೂಚಿಸಿದ್ದಾರೆ.
ರಾಜ್ಯ ಸರ್ಕಾರದಿಂದ OPS ಹೆಸರಿನಲ್ಲಿ ನೌಕರರಿಗೆ ‘ಮಕ್ಮಲ್ ಟೋಪಿ’ : ಮಾಜಿ ಸಿಎಂ ಹೆಚ್ಡಿಕೆ ಆಕ್ರೋಶ
BREAKING: ‘ಕರ್ನಾಟಕ ಬಜೆಟ್’ ಅಧಿವೇಶನಕ್ಕೆ ಮುಹೂರ್ತ ಫಿಕ್ಸ್: ಫೆ.12ರಂದು ಜಂಟಿ ಸದನ ಉದ್ದೇಶಿಸಿ ‘ರಾಜ್ಯಪಾಲರ ಭಾಷಣ’