ಬೆಳಗಾವಿ : ದೇಶಾದ್ಯಂತ ಇಂದು 75ನೇ ಗಣರಾಜ್ಯೋತ್ಸವವನ್ನು ಆಚರಿಸಲಾಗುತ್ತಿದೆ. ಇದರ ಅಂಗವಾಗಿ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಸಮ್ಮುಖದಲ್ಲಿ ಪತಸಂಚಲನ ನಡೆಯುತ್ತಿದ್ದು, ಇನ್ನೇನು ಕೆಲವೇ ಕ್ಷಣಗಳಲ್ಲಿ ಆರಂಭವಾಗಲಿದೆ.ಅದರಂತೆ ದೆಹಲಿಯಲ್ಲಿ ನಡೆಯಲಿರುವ ಪಥಸಂಚಲನಕ್ಕೆ ಬೆಳಗಾವಿ ಮೂಲದ ಯೋಧರೊಬ್ಬರು ಆಯ್ಕೆಯಾಗಿದ್ದಾರೆ.
ಹೌದು ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮರಿಕಟ್ಟಿ ಗ್ರಾಮದ ಯೋಧ ಅದೃಶ್ಯ ಮಾವಿನಕಟ್ಟಿ ಆಯ್ಕೆಯಾಗಿದ್ದಾರೆ. ಇವರು ಮದ್ರಾಸ್ ರೆಜಿಮೆಂಟ್ ಕ್ರೊಪ ವೆಲ್ಲಿಂಗ್ಟನ್ ನಲ್ಲಿ ತರಬೇತಿ ಪಡೆದಿದ್ದಾರೆ ಎಂದು ಹೇಳಲಾಗುತ್ತಿದ್ದು, ಕಳೆದ ಹಲವು ವರ್ಷಗಳಿಂದ ಅವರು ಸೇವೆ ಸಲ್ಲಿಸುತ್ತಿದ್ದಾರೆ.
ಬೆಳಗಾವಿ ಲಿಂಗರಾಜ ಕಾಲೇಜಿನಲ್ಲಿ ಎನ್ ಸಿಸಿ (NCC) ತರಬೇತಿ ಕೂಡ ಪಡೆದಿದ್ದಾರೆ ಎಂದು ಹೇಳಲಾಗುತ್ತಿದ್ದು, ಈ ಅಂಗವಾಗಿ ಇದೀಗ ದೆಹಲಿಯಲ್ಲಿ ನಡೆಯುವ ಪೆರೇಡ್‌ನಲ್ಲಿ ಅದೃಶ್ಯ ಭಾಗಿಯಾಗಿರುವುದು ಕುಟುಂಬಸ್ಥರು ಸೇರಿದಂತೆ ಕರುನಾಡಿನ ಜನತೆ ಹರ್ಷ ವ್ಯಕ್ತಪಡಿಸಿದ್ದಾರೆ