ಬೆಂಗಳೂರು: ರಾಜ್ಯದ ಮಧುಮೇಹಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ನಾಳೆ ಉಚಿತ ಡಯಾಲಿಸಿಸ್ ಸೇವೆಗಳನ್ನು ಉದ್ಘಾಟನೆ ಮಾಡಲಿದ್ದಾರೆ.
ಈ ಬಗ್ಗೆ ಆರೋಗ್ಯ ಮತ್ತು ಕುಟಂಬ ಕಲ್ಯಾಣ ಇಲಾಖೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ನಾಳೆ ಸಂಜೆ 5 ಗಂಟೆಗೆ ಬೆಂಗಳೂರಿನ ಮಲ್ಲೇಶ್ವರದಲ್ಲಿರುವಂತ ಕೆ.ಸಿ ಜನರಲ್ ಆಸ್ಪತ್ರೆಯಲ್ಲಿ, ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಉಚಿತ ಡಯಾಲಿಸಿಸ್ ಸೇವೆಗಳಿಗೆ ಉದ್ಘಾಟನೆ ಮಾಡಲಿದ್ದಾರೆ ಎಂದಿದೆ.
ಈ ಕಾರ್ಯಕ್ರಮದಲ್ಲಿ ವಿಶೇಷ ಆಹ್ವಾನಿತರಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಡಿಸಿಎಂ ಡಿಕೆ ಶಿವಕುಮಾರ್, ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಭಾಗಿಯಾಗಲಿದ್ದಾರೆ.
ಅಧ್ಯಕ್ಷತೆಯನ್ನು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವಹಿಸಿದ್ರೇ, ಮುಖ್ಯ ಅತಿಥಿಗಳಾಗಿ ಸಚಿವ ರಾಮಲಿಂಗಾರೆಡ್ಡಿ, ಕೆ.ಜೆ ಜಾರ್ಜ್, ಕೃಷ್ಣ ಬೈರೇಗೌಡ, ಜಮೀರ್ ಅಹ್ಮದ್ ಖಾನ್, ಬಿಎಸ್ ಸುರೇಶ್ ಕೂಡ ಹಾಜರಿರಲಿದ್ದಾರೆ. ಜೊತೆಗೆ ವಿಪಕ್ಷ ನಾಯಕ ಆರ್ ಅಶೋಕ್ ಭಾಗವಹಿಸಲಿದ್ದಾರೆ.
ಅಂದಹಾಗೇ 219 ಡಯಾಲಿಸಿಸ್ ಕೇಂದ್ರಗಳು, 800 ಡಯಾಲಿಸಿಸ್ ಯಂತ್ರಗಳನ್ನು ಒಳಗೊಂಡಿದೆ. ಇವುಗಳಿಗೆ ವಾರ್ಷಿಕ ಯೋಜನಾ ವೆಚ್ಚ 108 ಕೋಟಿಯಾಗಿದೆ. ಇವುಗಳಿಂದ 7.20 ಲಕ್ಷ ವಾರ್ಷಿಕ ಡಯಾಲಿಸಿಸ್ ಸೈಕಲ್ ಗಳು ನಡೆಯಲಿವೆ.
ಇದಷ್ಟೇ ಅಲ್ಲದೇ ಡಯಾಲಿಸಿಸ್ ಗುಣಮಟ್ಟ ಹೆಚ್ಚಿಸಲು ಏಕ ಬಳಕೆಯ ಡಯಾಲೈಸರ್ ಅಳವಡಿಸಲಾಗಿದೆ. ಈ ಮೂಲಕ ಡಯಾಲಿಸಿಸ್ ರೋಗಿಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ.
ಬಿಹಾರದಲ್ಲಿ ಹೊಸ ಗಾಳಿ ; ಜ.28ರಂದು ಸಿಎಂ ಸ್ಥಾನಕ್ಕೆ ‘ನಿತೀಶ್’ ರಾಜೀನಾಮೆ.? ಅದೇ ದಿನ ಹೊಸ ಸರ್ಕಾರ ರಚನೆ
ರೈಲು ಹಳಿಗಳ ಮೇಲೆ ಅಡುಗೆ ಮಾಡಿ, ತಿನ್ನುತ್ತಿರುವ ಜನ, ವಿಡಿಯೋ ವೈರಲ್, ರೈಲ್ವೆ ಪ್ರತಿಕ್ರಿಯೆ