ಬಿಹಾರ: ರಾಜ್ಯ ರಾಜಕೀಯದಲ್ಲಿ ಕ್ಷಿಪ್ರ ಬೆಳವಣಿಗೆ ಉಂಟಾಗಿದೆ. ಇಂದು ಸಂಜೆ 7 ಗಂಟೆಗೆ ರಾಜ್ಯಪಾಲರನ್ನು ಭೇಟಿಯಾಗಲಿರುವಂತ ನಿತೀಶ್ ಕುಮಾರ್ ಅವರು, ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡೋ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಇಂದು ಸಂಜೆ 7 ಗಂಟೆಗೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿರುವಂತ ನಿತೀಶ್ ಕುಮಾರ್, ನಾಳೆ ಮತ್ತೆ ಜೆಡಿಯು ಹಾಗೂ ಬಿಜೆಪಿ ನೇತೃತ್ವದ ಸಮ್ಮಿಶ್ರ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸೋ ಸಾಧಅಯತೆ ಇದೆ.
ಈಗಾಗಲೇ ಲೋಕಸಭಾ ಚುನಾವಣೆಗೆ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿರುವಂತ ನಿತೀಶ್ ಕುಮಾರ್, ಈಗ ಜೆಡಿಯು ಹಾಗೂ ಬಿಜೆಪಿಯೊಂದಿಗೆ ಸರ್ಕಾರ ರಚಿಸಿ, ಸಿಎಂ ಪಟ್ಟಕ್ಕೆ ಏರೋ ಎಲ್ಲಾ ಸಾಧ್ಯತೆ ಇದೆ. ಆ ಬಗ್ಗೆ ಕೆಲವೇ ಕ್ಷಣಗಳಲ್ಲಿ ಅಂತಿಮ ಅಧಿಕೃತ ಮಾಹಿತಿ ಹೊರ ಬೀಳಲಿದೆ.
ಪಿ.ಜಿ ಮಾಲೀಕರೇಗಮನಿಸಿ, ಈ ಮಾರ್ಗಸೂಚಿಗಳ ಪಾಲನೆ ಕಡ್ಡಾಯ, ಬೆಂಗಳೂರು ಪೊಲೀಸರಿಂದ ಎಚ್ಚರಿಕೆ
ಮಾನಸಿಕವಾಗಿ ಹಾಗೂ ದೈಹಿಕವಾಗಿ ಆರೋಗ್ಯವಾಗಿರಲು ಚಟುವಟಿಕೆಯಿಂದಿರಬೇಕು – ಸಿಎಂ ಸಿದ್ದರಾಮಯ್ಯ