ಬೆಂಗಳೂರು: ರಾಜ್ಯ ಸರ್ಕಾರದಿಂದ ನಿರುದ್ಯೋಗಿ ಯುವಕ, ಯುವತಿಯರಿಗೆ ಸ್ವ ಉದ್ಯೋಗ ಕೈಗೊಳ್ಳೋದಕ್ಕಾಗಿ ಸ್ವಾವಲಂಬಿ ಸಾರಥಿ ಯೋಜನೆ ಜಾರಿಗೊಳಿಸಲಾಗಿದೆ. ಈ ಯೋಜನೆಯಡಿ ನೀಡಲಾಗುವಂತ ಸಹಾಯಧನದ ಮೊತ್ತವನ್ನು 4 ಲಕ್ಷಕ್ಕೆ ಏರಿಕೆ ಮಾಡಲಾಗಿದೆ.
ಈ ಕುರಿತಂತೆ ರಾಜ್ಯ ಸರ್ಕಾರದಿಂದ ಮಾಹಿತಿ ನೀಡಲಾಗಿತ್ತು ಸಮಾಜ ಕಲ್ಯಾಣ ಇಲಾಖೆಯ ವಿವಿಧ ನಿಗಮಗಳ ಮೂಲಕ ಸ್ವಾಲಂಬಿ ಸಾರಥಿ ಯೋಜನೆಯಡಿ ನಿರುದ್ಯೋಗಿ ಯುವಕ, ಯುವತಿಯರು ಸರಕು ವಾಹನ, ಟ್ಯಾಕ್ಸಿ ಖರೀದಿಸೋದಕ್ಕೆ ಸಹಾಯಧನ ನೀಡಲಾಗುತ್ತಿದೆ ಎಂದು ಹೇಳಿದೆ.
ಪರಿಶಿಷ್ಟ ಜಾತಿ ನಿರುದ್ಯೋಗಿ ಯುವಕ, ಯುವತಿಯರಿಗೆ ವಾಣಿಜ್ಯ ಉದ್ದೇಶಕ್ಕಾಗಿ ನಾಲ್ಕು ಚಕ್ರದ ವಾಹನ ಖರೀದಿಗೆ ಸ್ವಾವಲಂಬಿ ಸಾರಥಿ ಯೋಜನೆಯಡಿ ಸಹಾಯಧನ ನೀಡಲಾಗುತ್ತಿದೆ ಎಂದು ತಿಳಿಸಿದೆ.
ಈ ಮೊದಲು 3.50 ಲಕ್ಷ ರೂ ಸಹಾಯಧನವನ್ನು ಸ್ವಾವಲಂಬಿ ಸಾರಥಿ ಯೋಜನೆಯಡಿ ನೀಡಲಾಗುತ್ತಿತ್ತು. 2023-24ನೇ ಸಾಲಿನಿಂದ 4 ಲಕ್ಷ ರೂಗಳಿಗೆ ಹೆಚ್ಚಿಸಲಾಗಿದೆ ಅಂತ ತಿಳಿಸಿದೆ.
BREAKING: ಆಸ್ಟ್ರೇಲಿಯನ್ ಓಪನ್ 2024: ‘ಆರ್ನಾ ಸಬಲೆಂಕಾ’ ಭರ್ಜರಿ ಗೆಲುವು | Australian Open 2024