ಬೆಂಗಳೂರು; ರಾಜ್ಯದಲ್ಲಿ ಇಂದು 103 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ವರದಿಯಿಂದ ದೃಢಪಟ್ಟಿದೆ. ಅಲ್ಲದೇ ಸೋಂಕಿತರಾದಂತ 134 ಮಂದಿ ಗುಣಮುಖರಾಗಿದ್ದಾರೆ.
ಈ ಬಗ್ಗೆ ರಾಜ್ಯ ಆರೋಗ್ಯ ಲಾಖೆಯಿಂದ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಕಳೆದ 24 ಗಂಟೆಯಲ್ಲಿ 2,224 ಜನರನ್ನು ಸೋಂಕು ಪತ್ತೆ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಹೇಳಿದೆ.
ಇಂದು ಹೊಸದಾಗಿ ಬಳ್ಳಾರಿ 03, ಬೆಳಗಾವಿ 04, ಬೆಂಗಳೂರು ಗ್ರಾಮಾಂತರ 01, ಬೆಂಗಳೂರು ನಗರ 65, ಬೀದರ್, ಚಿತ್ರದುರ್ಗ ಹಾಗೂ ಧಾರವಾಡ ಜಿಲ್ಲೆಯಲ್ಲಿ ತಲಾ ಒಬ್ಬರಿಗೆ ಸೋಂಕು ದೃಢಪಟ್ಟಿದೆ ಎಂದಿದೆ.
ಇನ್ನೂ ಹಾಸನ 02, ಕಲಬುರ್ಗಿ 03, ಕೊಪ್ಪಳ 02, ಮೈಸೂರು 05, ಶಿವಮೊಗ್ಗ 02, ತುಮಕೂರು 10 ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಮೂವರು ಸೇರಿದಂತೆ ಇಂದು 103 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ವರದಿಯಲ್ಲಿ ದೃಢಪಟ್ಟಿದೆ. ಸೋಂಕಿತರಾದಂತ 134 ಜನರು ಗುಣಮುಖರಾಗಿದ್ದಾರೆ. ಹೀಗಾಗಿ ರಾಜ್ಯದಲ್ಲಿ 310 ಸಕ್ರೀಯ ಸೋಂಕಿತರು ಇರುವುದಾಗಿ ತಿಳಿಸಿದೆ.
BREAKING: ಲೋಕಸಭಾ ಚುನಾವಣೆ: ರಾಜ್ಯದ 28 ಕ್ಷೇತ್ರಗಳಿಗೆ ‘ಬಿಜೆಪಿ ಉಸ್ತುವಾರಿ’ಗಳು ನೇಮಕ, ಇಲ್ಲಿದೆ ಸಂಪೂರ್ಣ ಲೀಸ್ಟ್
BREAKING : ಭೂಮಿ ಹಗರಣ ಪ್ರಕರಣ : ಬಿಹಾರ ಮಾಜಿ ಸಿಎಂ ಲಾಲು ಪತ್ನಿ ರಾಬ್ರಿ ದೇವಿ, ಪುತ್ರಿಯರಿಗೆ ‘ಕೋರ್ಟ್ ಸಮನ್ಸ್’