ಬೆಂಗಳೂರು : ಮಂಡ್ಯ ತಾಲೂಕಿನ ಕೆರಗೋಡಿನಲ್ಲಿ ಹನುಮಧ್ವಜ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ವಿಧಾನಸಭೆ ಪಕ್ಷ ನಾಯಕ ಆರ್. ಅಶೋಕ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದ್ದು ಮೈಸೂರು ಬ್ಯಾಂಕ್ ಸರ್ಕಲ್ ನಲ್ಲಿ 10.30ಕ್ಕೆ ಪ್ರತಿಭಟನೆ ನಡೆಯಲಿದೆ ಎಂದು ತಿಳಿದುಬಂದಿದೆ ಬೆಂಗಳೂರಿನ ಎಲ್ಲಾ ಬಿಜೆಪಿ ಶಾಸಕರು ಈ ಒಂದು ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ.
ಮಂಡ್ಯ ತಾಲೂಕಿನ ಕೆರಗೋಡಿನಲ್ಲಿ ಹನುಮಧ್ವಜ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಡ್ಯದಲ್ಲಿ ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ ಆಯೋಜನೆ ಮಾಡಲಾಗಿದೆ. ಕೆರಗೋಡು ಗ್ರಾಮದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿದ್ದು ಪಾದಯಾತ್ರೆ ನಡೆಸಿ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ ಹಾಕಲು ನಿರ್ಧರಿಸಲಾಗಿದೆ.
ಅದರಂತೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಮಂಡ್ಯಕ್ಕೆ ಭೇಟಿ ನೀಡಲಿದ್ದು ಕೆರಗೋಡು ರಾಮನಿಂದ ಮಂಡ್ಯ ನಗರದ ವರೆಗೆ ಪಾದಯಾತ್ರೆ ನಡೆಯಲಿದೆ ಮಧ್ಯಾಹ್ನ 12:30 ಕ್ಕೆ ನಡೆಯಲಿರುವ ಪ್ರತಿಭಟನೆಯಲ್ಲಿ ಎಚ್ ಡಿ ಕುಮಾರಸ್ವಾಮಿ ಭಾಗಿಯಾಗಲಿದ್ದಾರೆ. ಅಲೆಗೆ ರಾಜ ಸರ್ಕಾರದ ಹಿಂದೂ ವಿರೋಧಿ ನೀತಿಯನ್ನು ವಿರೋಧಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು ಇದಕ್ಕೆ ಜೆಡಿಎಸ್ ಕೂಡ ಸಾಥ್ ನೀಡಲಿದೆ.