ಬೆಂಗಳೂರು: ನೈರುತ್ಯ ರೈಲ್ವೆ ಇಲಾಖೆಯಿಂದ ಪ್ರಯಾಣಿಕರಿಗೆ ಅನುಕೂಲ ಕಲ್ಪಿಸೋ ನಿಟ್ಟಿನಲ್ಲಿ ಈ ಕೆಳಕಂಡ ಹತ್ತು ವಿಶೇಷ ರೈಲುಗಳ ಅವಧಿ ವಿಸ್ತರಣೆ ಮಾಡಲಾಗಿದೆ.
ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ನೈರುತ್ಯ ರೈಲ್ವೆಯಿಂದ ಮಾಹಿತಿ ನೀಡಲಾಗಿತ್ತು, ಪ್ರಯಾಣಿಕರಿಂದ ಹೆಚ್ಚುತ್ತಿರುವ ಬೇಡಿಕೆ ಪೂರೈಸುವ ಸಲುವಾಗಿ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಮತ್ತು ದಾನಾಪುರ ನಿಲ್ದಾಣಗಳ ನಡುವೆ ಚಲಿಸುವ ಹತ್ತು ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸೇವೆಯ ಅವಧಿಯನ್ನು ವಿಸ್ತರಿಸಲು ಪೂರ್ವ ಮಧ್ಯ ರೈಲ್ವೆ ವಲಯವು ಸೂಚಿಸಿದೆ. ಈ ವಿಶೇಷ ರೈಲುಗಳು ಅಸ್ತಿತ್ವದಲ್ಲಿರುವ ಮಾರ್ಗ, ನಿಲುಗಡೆ ಮತ್ತು ಸಮಯದೊಂದಿಗೆ ಸಂಚರಿಸಲಿವೆ. ಅವುಗಳ ವಿವರ ಈ ಕೆಳಗಿನಂತಿವೆ.
1. ರೈಲು ಸಂಖ್ಯೆ 03245 ದಾನಾಪುರ-ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ರೈಲನ್ನು 24.04.2024 ರವರೆಗೆ ವಿಸ್ತರಿಸಲಾಗುತ್ತಿದೆ.
2. ರೈಲು ಸಂಖ್ಯೆ 03246 ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು-ದಾನಾಪುರ ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ರೈಲನ್ನು 26.04.2024 ರವರೆಗೆ ವಿಸ್ತರಿಸಲಾಗುತ್ತಿದೆ.
3. ರೈಲು ಸಂಖ್ಯೆ 03251 ದಾನಾಪುರ- ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ದ್ವಿ-ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ರೈಲನ್ನು 29.04.2024 ರವರೆಗೆ ವಿಸ್ತರಿಸಲಾಗುತ್ತಿದೆ.
4. ರೈಲು ಸಂಖ್ಯೆ 03252 ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು-ದಾನಾಪುರ ದ್ವಿ-ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ರೈಲನ್ನು 01.05.2024 ರವರೆಗೆ ವಿಸ್ತರಿಸಲಾಗುತ್ತಿದೆ.
5. ರೈಲು ಸಂಖ್ಯೆ 03259 ದಾನಾಪುರ-ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ರೈಲನ್ನು 30.04.2024 ರವರೆಗೆ ವಿಸ್ತರಿಸಲಾಗುತ್ತಿದೆ.
6. ರೈಲು ಸಂಖ್ಯೆ 03260 ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು-ದಾನಾಪುರ ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ರೈಲನ್ನು 02.05.2024 ರವರೆಗೆ ವಿಸ್ತರಿಸಲಾಗುತ್ತಿದೆ.
7. ರೈಲು ಸಂಖ್ಯೆ 03247 ದಾನಾಪುರ-ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ರೈಲನ್ನು 25.04.2024 ರವರೆಗೆ ವಿಸ್ತರಿಸಲಾಗುತ್ತಿದೆ.
8. ರೈಲು ಸಂಖ್ಯೆ 03248 ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು-ದಾನಾಪುರ ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ 27.04.2024 ರವರೆಗೆ ವಿಸ್ತರಿಸಲಾಗುತ್ತಿದೆ.
9. ರೈಲು ಸಂಖ್ಯೆ 03241 ದಾನಾಪುರ-ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ರೈಲನ್ನು 26.04.2024 ರವರೆಗೆ ವಿಸ್ತರಿಸಲಾಗುತ್ತಿದೆ.
10. ರೈಲು ಸಂಖ್ಯೆ 03242 ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು-ದಾನಾಪುರ ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ರೈಲನ್ನು 28.04.2024 ರವರೆಗೆ ವಿಸ್ತರಿಸಲಾಗುತ್ತಿದೆ.
ಮುಸ್ಲಿಮರ ಓಲೈಕೆಯಲ್ಲೂ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಭಾರಿ ಪೈಪೋಟಿ – ಆರ್.ಅಶೋಕ್ ಕಿಡಿ
ಮಾಲ್ಡೀವ್ಸ್ ಅಧ್ಯಕ್ಷ ‘ಮುಯಿಝು’ ಪದಚ್ಯುತಿ ಪಕ್ಕಾ.? : ‘ವಾಗ್ದಂಡನೆ ನಿರ್ಣಯ’ ಮಂಡನೆಗೆ ವಿಪಕ್ಷಗಳ ಸಿದ್ಧತೆ : ವರದಿ