ಶಿವಮೊಗ್ಗ: ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಪೌರಕಾರ್ಮಿಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಮತ್ತು ಎಲ್ಲಾ ಅರ್ಹತಾ ಮಾನದಂಡಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳು ಅಧಿಸೂಚನೆಯನ್ನು ಓದಿ ಅರ್ಜಿ ಸಲ್ಲಿಸಬಹುದು.
ಅರ್ಜಿ ಶುಲ್ಕ : ಎಸ್ಸಿ/ಎಸ್ಟಿ/ಪ್ರವರ್ಗ-1/ಅಂಗವಿಕಲ ಅಭ್ಯರ್ಥಿಗಳಿಗೆ 100 ರೂ. 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 200 ರೂ.
ಪಾವತಿ ವಿಧಾನ: ಆಫ್ ಲೈನ್ ಮೂಲಕ
ಶಿವಮೊಗ್ಗ ಮಹಾನಗರಪಾಲಿಕೆಗೆ ಮಂಜೂರಾದ ಸಂಖ್ಯಾತಿರಿಕ್ತ ಪೌರಕಾರ್ಮಿಕರ ಹುದ್ದೆಗಳನ್ನು ಹೊಸದಾಗಿ ಸೃಜಿಸಿ ಹೊರಡಿಸಿರುವ ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 171 ಎಂಎನ್‌ಇ 2022(ಇ), ದಿನಾಂಕ: 09.03.2023 ರಂತೆ ಹಾಗೂ ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 171 ಎಂಎನ್‌ಇ 2022(ಇ), ದಿನಾಂಕ: 27.10.2023 ರಂದು ಹೊರಡಿಸಿರುವ ಸೇರ್ಪಡೆ ಆದೇಶದನ್ವಯ ಕರ್ನಾಟಕ ರಾಜ್ಯ ಪತ್ರ ಅಧಿಸೂಚನೆ ಸಂಖ್ಯೆ: ನಅಇ 171 ಎಂಎನ್‌ಇ 2022(ಇ), ದಿನಾಂಕ: 02.11.2023 ರನ್ವಯ ಕರ್ನಾಟಕ ಮುನಿಸಿಪಲ್ ಕಾರ್ಪೊರೇಷನ್ (ರಾಜ್ಯದ ಪಾಲಿಕೆಗಳ ಪೌರಕಾರ್ಮಿಕರ ನೇಮಕಾತಿ)(ವಿಶೇಷ) ನಿಯಮಗಳು 2022 ರ ರೀತ್ಯಾ ಮಂಜೂರಾದ ಸಂಖ್ಯಾತಿರಿಕ್ತ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಶಿವಮೊಗ್ಗ ಮಹಾನಗರಪಾಲಿಕೆಗೆ ಮಂಜೂರಾದ ಸಂಖ್ಯಾತಿರಿಕ್ತ ಹುದ್ದೆಗಳು ಹಾಗೂ ವರ್ಗೀಕರಣ ಈ ಕೆಳಕಂಡಂತ್ತಿರುತ್ತದೆ.
ವಯೋಮಿತಿ:
01. ಕರ್ನಾಟಕ ನಾಗರೀಕ ಸೇವಾ (ಸಾಮಾನ್ಯ ನೇಮಕಾತಿ) ನಿಯಮಾವಳಿ 1977 ರ ನಿಯಮಗಳು ಅಥವಾ ಕರ್ನಾಟಕ ಮುನಿಸಿಪಲ್ ಕಾರ್ಪೊರೇಷನ್ (ಅಧಿಕಾರಿ & ನೌಕರರ ನೇಮಕಾತಿ) ನಿಯಮಗಳು 2011ರ ನಿಯಮಗಳಲ್ಲಿ ಏನೇ ಹೇಳಿದ್ದರೂ, ಕರ್ನಾಟಕ ರಾಜ್ಯ ಪತ್ರ ಅಧಿಸೂಚನೆ ಸಂಖ್ಯೆ:ನಅಇ 171 ಎಂಎನ್‌ಇ 2022(ಇ), ದಿನಾಂಕ:02.11.2023 ರಲ್ಲಿ ಹೊರಡಿಸಿದ ಅಧಿಸೂಚನೆ ಜಾರಿಗೆ ಬಂದ ದಿನಾಂಕದಿಂದ ಗರಿಷ್ಟ ವಯೋಮಿತಿ 55 ವರ್ಷಗಳನ್ನು ಮೀರತಕ್ಕದ್ದಲ್ಲ.
02. ಶೈಕ್ಷಣಿಕ/ವಿದ್ಯಾರ್ಹತೆ ದಾಖಲೆಗಳು/ಆಧಾರ್ ಕಾರ್ಡ್/ಮತದಾರರ ಗುರುತಿನ ಚೀಟಿ/ಪಡಿತರ ಚೀಟಿ ಅಥವಾ ಪ್ರಾವಿಡೆಂಟ್ ಫಂಡ್ ಅಥವಾ ಇ.ಎಸ್.ಐ. ದಾಖಲಾತಿಗಳನ್ನು ಆಧರಿಸಿ ಅಭ್ಯರ್ಥಿಯ ವಯಸ್ಸನ್ನು
ನಿರ್ಧರಿಸಲಾಗುವುದು.
03. ಮೇಲ್ಕಂಡ ಕ್ರ.ಸಂ.01 & 02 ರಲ್ಲಿ ಏನೇ ಹೇಳಿದ್ದರೂ, ಕರ್ನಾಟಕ ಮುನಿಸಿಪಲ್ ಕಾರ್ಪೊರೇಷನ್ (ರಾಜ್ಯದ ಪಾಲಿಕೆಗಳ ಪೌರಕಾರ್ಮಿಕರ ನೇಮಕಾತಿ) (ವಿಶೇಷ) ನಿಯಮಗಳು 2022 ರಲ್ಲಿ ವಯೋಮಿತಿಗೆ ಸಂಬಂಧಿಸಿದಂತೆ ಸರ್ಕಾರವು ಹೊರಡಿಸುವ ಆದೇಶಕ್ಕೆ ಈ ಅಧಿಸೂಚನೆಯು ಒಳಪಟ್ಟಿರುತ್ತದೆ.
ಕನಿಷ್ಠ ವಿದ್ಯಾರ್ಹತೆ
01. ಕನ್ನಡ ಭಾಷೆ ಮಾತನಾಡಲು ಗೊತ್ತಿರಬೇಕು.
ನೇಮಕಾತಿ ಅರ್ಹತೆ/ವಿಧಾನ:
01. ಅಭ್ಯರ್ಥಿಗಳು ಹಾಲಿ ನೇರಪಾವತಿ, ಕ್ಷೇಮಾಭಿವೃದ್ಧಿ ಅಥವಾ ದಿನಗೂಲಿ ಆಧಾರದ ಮೇಲೆ ಕನಿಷ್ಠ ಎರಡು ವರ್ಷಗಳಿಗೆ ಕಡಿಮೆ ಇಲ್ಲದಂತೆ ನಿರಂತರವಾಗಿ ಸೇವೆಯನ್ನು ಸಲ್ಲಿಸುತ್ತಿರುವ, ಹಾಗೂ ಈ ನಿಯಮ ಜಾರಿಗೆ ಬಂದ ದಿನಾಂಕದಲ್ಲಿಯೂ ಕರ್ತವ್ಯ ನಿರ್ವಹಿಸುತ್ತಿರುವ ಪೌರಕಾರ್ಮಿಕರಿಗೆ ಆಧ್ಯತೆಯನ್ನು ನೀಡಲಾಗುವುದು. 02. ನೇಮಕಾತಿಯಲ್ಲಿ ಹಾಲಿ ನೇರಪಾವತಿ, ಕ್ಷೇಮಾಭಿವೃದ್ಧಿ ಅಥವಾ ದಿನಗೂಲಿ ಅಥವಾ ಸಮಾನ ಕೆಲಸಕ್ಕೆ ಸಮಾನ ವೇತನ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರನ್ನು ಅನುಕ್ರಮವಾಗಿ ಪರಿಗಣಿಸಲಾಗುವುದು. 03. ಹಾಲಿ ನೇರಪಾವತಿ, ಕ್ಷೇಮಾಭಿವೃದ್ದಿ, ದಿನಗೂಲಿ, ಸಮಾನ ಕೆಲಸಕ್ಕೆ ಸಮಾನ ವೇತನ, ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವವರು 2 ವರ್ಷಗಳಿಗೆ ಮೇಲ್ಪಟ್ಟು ಶಿವಮೊಗ್ಗ ಮಹಾನಗರಪಾಲಿಕೆಯಿಂದ ವೇತನ ಪಡೆದ ದಾಖಲಾತಿಗಳನ್ನು ಸಲ್ಲಿಸತಕ್ಕದ್ದು.
04. ನೇರಪಾವತಿ ನೌಕರರಿಗೆ ಸಂಬಂಧಿಸಿದಂತೆ ಮಹಾನಗರಪಾಲಿಕೆಯಿಂದ ಪಾವತಿಸಲಾದ ವೇತನ, ಕಾರ್ಮಿಕರ ರಾಜ್ಯ ವಿಮೆ (ಇ.ಎಸ್.ಐ) & ಭವಿಷ್ಯ ನಿಧಿ (ಪಿ.ಎಫ್) & ವೇತನ ಪಡೆದ ಎರಡು ವರ್ಷಗಳ ದಾಖಲಾತಿಗಳನ್ನು ನೇಮಕಾತಿಯಲ್ಲಿ ಆದ್ಯತೆಯ ಮೇಲೆ ಪರಿಗಣಿಸಲಾಗುವುದು.
05. ಎರಡು ಮತ್ತು ಅದಕ್ಕಿಂತ ಹೆಚ್ಚಿನ ಅಭ್ಯರ್ಥಿಗಳ ಸೇವಾ ಅವಧಿ ಒಂದೇ ಇದ್ದ ಪಕ್ಷದಲ್ಲಿ, ಅಂತಹ ಅಭ್ಯರ್ಥಿಗಳ ಜೇಷ್ಟತೆಯನ್ನು ಅವರ ವಯಸ್ಸಿಗೆ ಅನುಗುಣವಾಗಿ ಅಂದರೆ ಹೆಚ್ಚು ವಯಸ್ಕರನ್ನು ಕಡಿಮೆ ವಯಸ್ಕರಿಗಿಂತ ಮೇಲೆ ಪರಿಗಣಿಸಲಾಗುವುದು ಹಾಗೂ ಹುಟ್ಟಿದ ದಿನಾಂಕ ಹಾಗೂ ಸೇವಾ ಅವಧಿ ಒಂದೇ ಆಗಿದ್ದಲ್ಲಿ ಲಾಟರಿ ಮುಖಾಂತರ ಪರಿಗಣಿಸಲಾಗುವುದು.
06. ಸಂಖ್ಯಾತಿರಿಕ್ತ ಹುದ್ದೆಗಳನ್ನು ಭರ್ತಿ ಮಾಡಬೇಕಾದರೆ ಸಮತಲ ಮೀಸಲಾತಿಯಡಿ ಕನ್ನಡ ಮಾಧ್ಯಮ, ಗ್ರಾಮೀಣ ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆಂದು ಮೀಸಲಾದ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಲಭ್ಯವಿಲ್ಲದ ಪಕ್ಷದಲ್ಲಿ ಈ ಮೀಸಲಾದ ಹುದ್ದೆಗಳಿಗೆ ಉಳಿದ ಅರ್ಹರಿರುವ ಪೌರಕಾರ್ಮಿಕರುಗಳನ್ನು ಪರಿಗಣಿಸಲಾಗುವುದು.
07. ಅರ್ಜಿಯಲ್ಲಿ ನಮೂದಿಸಿರುವ ಎಲ್ಲಾ ದಾಖಲೆಗಳನ್ನು ಅರ್ಜಿ ಸಲ್ಲಿಕೆಗೆ ನಿಗಧಿ ಪಡಿಸಿರುವ ಕೊನೆಯ ದಿನಾಂಕದೊಳಗೆ ಪಡೆದಿರತಕ್ಕದ್ದು, ಹಾಗೂ ಮೂಲ ದಾಖಲೆಗಳನ್ನು ದಾಖಲಾತಿ ಪರಿಶೀಲನೆ ಸಮಯದಲ್ಲಿ ಕಡ್ಡಾಯವಾಗಿ ಹಾಜರುಪಡಿಸತಕ್ಕದ್ದು.
08. ಈ ನೇಮಕಾತಿಯು ಸರ್ಕಾರ/ಪೌರಾಡಳಿತ ನಿರ್ದೇಶನಾಲಯದಿಂದ ಕಾಲಕಾಲಕ್ಕೆ ಹೊರಡಿಸಲಾಗುವ ಆದೇಶ ಮತ್ತು ಸುತ್ತೋಲೆಗಳ ಷರತ್ತು ಮತ್ತು ನಿಬಂಧನೆಗಳಿಗೆ ಒಳಪಟ್ಟಿದೆ.
09. ಅಭ್ಯರ್ಥಿಯ ಹೆಸರನ್ನು ಪ್ರಕಟಿಸಿದ ಮಾತ್ರಕ್ಕೆ ಅವರ ನೇಮಕಾತಿಯ ಹಕ್ಕು ಎಂದು ಪರಿಭಾವಿಸತಕ್ಕದ್ದಲ್ಲ.
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
01. ದಿನಾಂಕ:24.01.2024 ರಿಂದ ಅರ್ಜಿಗಳನ್ನು ಆಯುಕ್ತರು, ಮಹಾನಗರಪಾಲಿಕೆ, ಶಿವಮೊಗ್ಗರವರ ಕಛೇರಿಯಲ್ಲಿ ಪಡೆಯಬಹುದಾಗಿರುತ್ತದೆ.
02. ಭರ್ತಿ ಮಾಡಿದ ಅರ್ಜಿಗಳನ್ನು ದಿನಾಂಕ:22.02.2024 ರೊಳಗೆ ಆಯುಕ್ತರು, ಮಹಾನಗರಪಾಲಿಕೆ, ಶಿವಮೊಗ್ಗರವರ ಕಛೇರಿಯಲ್ಲಿ ಸಂಜೆ 5.30 ರೊಳಗೆ ಸಲ್ಲಿಸತಕ್ಕದ್ದು.
03. ಅರ್ಜಿ ಶುಲ್ಕ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, ಅಂಗವಿಕಲ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ರೂ.100.00 ಮತ್ತು ಸಾಮಾನ್ಯ ವರ್ಗ 2ಎ, 2ಬಿ, 3ಎ, 3ಬಿ ವರ್ಗದ ಅಭ್ಯರ್ಥಿಗಳಿಗೆ ರೂ.200.00 ಗಳ ನಗದು ಚಲನ್ ಮುಖಾಂತರ ಅದನ್ನು ಸಲ್ಲಿಸಿ ಅರ್ಜಿಯನ್ನು ಪಡೆಯತಕ್ಕದ್ದು.
ಮೀಸಲಾತಿ ಕೋರ ಬಯಸುವ ಪ್ರಮಾಣ ಪತ್ರಗಳು
ಎ. ಜಾತಿ ಮೀಸಲಾತಿ ಕೋರ ಬಯಸುವ ಪ್ರಮಾಣ ಪತ್ರಗಳು
01. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳು ನಮೂನೆ-ಡಿ ರಲ್ಲಿ
02. ಪ್ರವರ್ಗ 1 ರ ಅಭ್ಯರ್ಥಿಗಳು ನಮೂನೆ-ಇ ನಲ್ಲಿ
03. 2-ಎ, 2-ಬಿ, 3-ಎ, 3ಬಿ ಅಭ್ಯರ್ಥಿಗಳು ನಮೂನೆ-ಎಫ್ ನಲ್ಲಿ ಸಂಬಂಧಿತ ತಹಶೀಲ್ದಾರ್ ರವರಿಂದ ಅರ್ಜಿ ಸಲ್ಲಿಸಲು ನಿಗಧಿಪಡಿಸಿದ ಕೊನೆಯ ದಿನಾಂಕದೊಳಗೆ ಪ್ರಮಾಣ ಪತ್ರವನ್ನು ಪಡೆದಿರಬೇಕು ಹಾಗೂ ಈ ಪ್ರಮಾಣ ಪತ್ರದ ದೃಢೀಕೃತ ಪ್ರತಿಯನ್ನು ಅರ್ಜಿಯೊಂದಿಗೆ ಕಡ್ಡಾಯವಾಗಿ ಲಗತ್ತಿಸಬೇಕು. ಈ ಹುದ್ದೆಗಳಿಗಾಗಿ ಆಯ್ಕೆ ಹೊಂದುವ ಅಭ್ಯರ್ಥಿಗಳಿಗೆ ಸಂಬಂಧಿಸಿದಂತೆ ಜಾತಿ ಪ್ರಮಾಣ ಪತ್ರಗಳನ್ನು ನೇಮಕಾತಿ ಪ್ರಾಧಿಕಾರವು ಅವುಗಳ ಸಿಂಧುತ್ವದ ಬಗ್ಗೆ ಪರಿಶೀಲನೆ ಒಳಪಡಿಸಲಾಗುತ್ತದೆ.
ಬಿ. ಗ್ರಾಮೀಣ ಅಭ್ಯರ್ಥಿ
1. ಸರ್ಕಾರ ಅಧಿಸೂಚನೆ ಸಂಖ್ಯೆ:ಸಂವ್ಯಶಾವಿ.59.ಶಾಸನ 2000 ದಿನಾಂಕ: 06.01.2001 ರ ಅನ್ವಯ ಗ್ರಾಮೀಣ ಮೀಸಲಾತಿಯಡಿ ಅರ್ಜಿ ಸಲ್ಲಿಸುವಂತೆ ಅಭ್ಯರ್ಥಿಗಳು ನಿಯಮಗಳ ರೀತ್ಯಾ 1ನೇ ರಿಂದ 10ನೇ ತರಗತಿಯವರೆಗೆ ಗ್ರಾಮೀಣ ಮೀಸಲಾತಿ ಒಳಪಡುವ ಪ್ರದೇಶಗಳಲ್ಲಿ ವ್ಯಾಸಂಗ ಮಾಡಿ ಉತ್ತೀರ್ಣರಾಗಿದ್ದಲ್ಲಿ ಮಾತ್ರ ಈ ಮೀಸಲಾತಿ ಪಡೆಯಲು ಅರ್ಹರು. ಗ್ರಾಮೀಣ ಅಭ್ಯರ್ಥಿಗಳಿಗೆಂದು ಮೀಸಲಿರಿಸಿದ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳು ಸರ್ಕಾರಿ ಆದೇಶ ಸಂಖ್ಯೆ:ಸಿಆಸುಇ. 08.ಸೆನೇನಿ.2001, ದಿನಾಂಕ:13.2.2001 ರನ್ವಯ ನಮೂನೆ-2 ಅನ್ನು ಸಂಬಂಧ ಪಟ್ಟ ಶಾಲೆಯ ಮುಖ್ಯೋಪಾಧ್ಯಾಯರ ಸಹಿ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿರವರ ಮೇಲು ರುಜುವಿನೊಂದಿಗೆ ಹಾಗೂ