ಬೆಂಗಳೂರು : ರಾಜ್ಯದ ಒಂಬತ್ತು ಜಿಲ್ಲೆಗಳಲ್ಲಿ ರೈತರ ಕೊಬ್ಬರಿಗೆ ಬೆಂಬಲ ಬೆಲೆ ಒದಗಿಸಲು ಕೇಂದ್ರ ಸರ್ಕಾರ ರೂಪಿಸಿರುವ ಮಾರ್ಗಸೂಚಿ ಅನ್ವಯ ಪ್ರತಿ ಕ್ವಿಂಟಲ್ ಕೊಬ್ಬರಿಗೆ ಕೇಂದ್ರದ 12,000 ರು. ಜತೆಗೆ ರಾಜ್ಯದಿಂದ 1,500 &. 93.73 ಕೋಟಿ ರು. ಬಿಡುಗಡೆ ಮಾಡಿ ಸಹಕಾರ ಇಲಾಖೆ ಆದೇಶ ಹೊರಡಿಸಿದೆ.
ತುಮಕೂರು, ಹಾಸನ, ಚಿಕ್ಕಮಗಳೂರು, ಚಿತ್ರದುರ್ಗ, ಮಂಡ್ಯ, ಮೈಸೂರು, ದಕ್ಷಿಣ ಕನ್ನಡ, ಚಾಮರಾಜನಗರ ಮತ್ತು ರಾಮ ನಗರ ಜಿಲ್ಲೆಗಳಲ್ಲಿ ಕೇಂದ್ರ ಸರ್ಕಾರದ ಮಾರ್ಗಸೂಚಿ ಅನ್ವಯ ಕ್ವಿಂಟಲ್ ಕೊಬ್ಬರಿಗೆ ಕೇಂದ್ರದ 12,000 ರು. ಬೆಂಬಲ ಬೆಲೆ ಜತೆಗೆ ರಾಜ್ಯ ಸರ್ಕಾರದಿಂದ 2022-23ರಲ್ಲಿ ಘೋಷಿಸಿದ್ದ 1,250 ರು. ಜತೆಗೆ ಪ್ರಸಕ್ತ ಸಾಲಿನಲ್ಲಿ 250 ರು. ಸೇರಿಸಿ 1,500 ರು.ಗಳಂತೆ ನೀಡಲು 93.73 ಕೋಟಿ ರು. ಬಿಡುಗಡೆಗೆ ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಗೆ ಮಂಜೂರಾತಿ ನೀಡಲಾಗಿದೆ.
ರಾಜ್ಯದಲ್ಲಿ ಕೊಬ್ಬರಿ ಬೆಳೆವ ಅವರಿಗೆ ಬೆಂಬಲ ಬೆಲೆ ಕೊಡಬೇಕು ಎಂದು ಆಗ್ರಹಿಸಿ ಜೆಡಿಎಸ್ ರಾಜ್ಯಾಧ್ಯಕ್ಷ HD ಕುಮಾರಸ್ವಾಮಿಯವರು ಈ ಹಿಂದೆ ಪ್ರತಿಭಟನೆ ನಡೆಸಿದ್ದರು. ಅಲ್ಲದೆ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಜೊತೆ ಸೇರಿ ಪ್ರಧಾನಿಗೆ ಈ ಬಗ್ಗೆ ಮನವಿಯನ್ನೂ ಸಲ್ಲಿಸಿದ್ದರು. ಜೆಡಿಎಸ್ ಪಕ್ಷದ ವತಿಯಿಂದ ಈ ಬಗ್ಗೆ ಪ್ರತಿಭಟನೆಯನ್ನೂ ನಡೆಸಲಾಗಿತ್ತು.