ಮಂಡ್ಯ : ಇನ್ನೇನು ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿ ಜೆಡಿಎಸ್ ಜಂಟಿಯಾಗಿ ಲೋಕಸಭಾ ಚುನಾವಣೆ ಎದುರಿಸುತ್ತಿದ್ದು ಕಾಂಗ್ರೆಸ್ ಕೂಡ ಭರ್ಜರಿ ತಯಾರಿ ಮಾಡಿಕೊಂಡಿದೆ. ಇದರ ಬೆನ್ನಲ್ಲೇ ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಕಂಡ ಸಂಸದ ಸುಮಲತಾ ಅಂಬರೀಶ್ ಬಹಿರಂಗವಾಗಿ ಬಿಜೆಪಿಗೆ ಬೆಂಬಲ ಸೂಚಿಸಿದ್ದರು. ಇದೀಗ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಹಿನ್ನೆಲೆ ಆ ಒಂದು ಕ್ಷೇತ್ರದಲ್ಲಿ ಯಾವ ಅಭ್ಯರ್ಥಿಗೆ ಲೋಕಸಭಾ ಟಿಕೆಟ್ ನೀಡಬೇಕೆನ್ನುವುದು ಗೊಂದಲಮಯವಾಗಿದೆ.
ಇನ್ನು ಇದೇ ವಿಚಾರವಾಗಿ ಮಾಧ್ಯಮದೊಂದಿಗೆ ಸಂಸದ ಅಂಬರೀಶ್ ಮಾತನಾಡಿದ್ದು, ಬಿಜೆಪಿಯಿಂದ ಮಂಡ್ಯ ಬಿಟ್ಟು ಬೇರೆ ಕೊಟ್ಟರೆ ನನಗೆ ಆಸಕ್ತಿ ಇಲ್ಲ. ನನಗೆ ಮಂಡ್ಯದ ಸೇವೆ ಮಾಡಬೇಕು ಎಂಬ ಹಂಬಲ ಇನ್ನೂ ಇದೆ.ಮೋದಿ ಕೆಲಸಗಳನ್ನು ನೋಡಿ ನಾನು ಬಿಜೆಪಿಗೆ ಬೆಂಬಲ ಕೊಟ್ಟಿದ್ದೇನೆ. ಬಿಜೆಪಿಗೆ ನನ್ನ ಬೆಂಬಲ ಈಗಲೂ ಇದೆ ಎಂದು ಅವರು ತಿಳಿಸಿದರು.
ಬಿಜೆಪಿ ಜೆಡಿಎಸ್ ಮೈತ್ರಿ ಆದ ಮೇಲೆ ಯಾರ ಜೊತೆಯೂ ಚರ್ಚಿಸಿಲ್ಲ. ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ನನಗೆ ಕರೆ ಮಾಡಿದ್ದರು.ನಾನು ಜೊತೆಯಲ್ಲಿ ಬಂದು ಮಾತನಾಡುತ್ತೇನೆ ಎಂದು ವಿಜಯೇಂದ್ರ ಹೇಳಿದ್ದಾರೆ. ಆದರೆ ಸಂಸತ್ ಅಧಿವೇಶನ ಹಿನ್ನೆಲೆ ನಾನು ದೆಹಲಿಗೆ ಹೋಗುತ್ತಿದ್ದೇನೆ.ಮಂಡ್ಯ ಜಿಲ್ಲೆ ಜನ ನನಗೆ ಹೆಚ್ಚು ಮತಗಳಿಂದ ಗೆಲ್ಲಿಸಿ ಕೊಟ್ಟಿದ್ದಾರೆ. ನನ್ನ ಸ್ವಾರ್ಥಕ್ಕೆ ನಾನು ಮಂಡ್ಯ ಕ್ಷೇತ್ರದಿಂದ ದೂರ ಸರಿಯುವುದಿಲ್ಲ. ಎಂದು ಸುಮಲತಾ ಅಂಬರೀಶ್ ತಿಳಿಸಿದ್ದಾರೆ.
ನನ್ನ ಟ್ರ್ಯಾಕ್ ರೆಕಾರ್ಡ್ ಮೋದಿಗೆ ಚೆನ್ನಾಗಿ ಗೊತ್ತಿದೆ ಹೀಗಾಗಿ ನನಗೆ ಹೊಸ ಸಂಪೂರ್ಣವಾಗಿ ಮೋದಿ ಬೆಂಬಲ ನೀಡಿದ್ದಾರೆ ಜೆಡಿಎಸ್ ನಾಯಕರು ನಮ್ಮ ಮನೆಗೆ ಬಂದರೆ ಬೇಡ ಅನ್ನುವುದಿಲ್ಲ. ಮಂಡ್ಯ ಜನತೆ ಹೆಚ್ಚಿನ ಮತಗಳಿಂದ ನನ್ನನ್ನು ಗೆಲ್ಲಿಸಿದ್ದಾರೆ ಹಾಗಾಗಿ ನನ್ನ ಸ್ವಾರ್ಥಕ್ಕೆ ಮಂಡ್ಯದಿಂದ ದೂರ ಸರಿಯುವುದಿಲ್ಲ. ಮೋದಿಯವರ ಕೆಲಸ ನೋಡಿ ನಾನು ಬೆಂಬಲ ಕೊಟ್ಟಿದ್ದೇನೆ ಈಗಲೂ ಬಿಜೆಪಿ ಅವರಿಗೆ ನನ್ನ ಬೆಂಬಲ ಇದೆ ಎಂದರು.
ಮಂಡ್ಯ ತಾಲೂಕಿನ ಕೆರಗೋಡಿನಲ್ಲಿ ಹನುಮಧ್ವಜ ತೆರವು ಪ್ರಕರಣ ಸಂಬಂಧಿಸಿದಂತೆ ಮಂಡ್ಯ ಕ್ಷೇತ್ರದ ಸಂಸದ ಸುಮಲತಾ ಅಂಬರೀಶ್ ಅವರು ಪ್ರತಿಕ್ರಿಯೆ ನೀಡಿದ್ದು ಅಲ್ಲಿನ ಪರಿಸ್ಥಿತಿ ಅವಲೋಕಿಸಿ ಸೂಕ್ತ ಕ್ರಮ ತೆಗೆದುಕೊಳ್ಳಬಹುದಾಗಿತ್ತು. ಕಾನೂನುಬಾಹಿರವಾಗಿದ್ದರೆ ಮೊದಲೇ ಏಕೆ ಕ್ರಮ ಕೈಗೊಂಡಿಲ್ಲ? ಸ್ಥಳೀಯರ ಜೊತೆ ಚರ್ಚಿಸಿ ಅಗತ್ಯವಾದಂತಹ ಕ್ರಮ ತೆಗೆದುಕೊಳ್ಳಬೇಕಿತ್ತು.ಶಾಸಕರ ವಿರುದ್ಧವು ಕೂಡ ಆರೋಪ ಕೇಳಿ ಬಂದಿದೆ. ಅಲ್ಲಿನ ಪರಿಸ್ಥಿತಿಯನ್ನು ಗಮನಿಸದೆ ಕ್ರಮ ಕೈಗೊಂಡಿದ್ದು ತಪ್ಪು ಎಂದರು.