ನವದೆಹಲಿ: ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಉತ್ತರ ಭಾರತದ ಹಲವಾರು ರಾಜ್ಯಗಳಲ್ಲಿ ತೀವ್ರ ಶೀತ ಅಲೆ ಮತ್ತು ಅತಿ ಹೆಚ್ಚು ಮಳೆಯಾಗುವ ಬಗ್ಗೆ ಕಿತ್ತಳೆ ಮತ್ತು ಹಳದಿ ಎಚ್ಚರಿಕೆ ನೀಡಿದೆ. ಜನವರಿ 29 ರಿಂದ ಫೆಬ್ರವರಿ 3 ರವರೆಗೆ ಪಶ್ಚಿಮ ಹಿಮಾಲಯನ್ ಪ್ರದೇಶದಲ್ಲಿ ತೇವಾಂಶವಿರುತ್ತದೆ ಎಂದು ಐಎಂಡಿ ಮುನ್ಸೂಚನೆ ನೀಡಿದ್ದು, ಜನವರಿ 30 ಮತ್ತು 31 ರಂದು ಭಾರಿ ಮಳೆಯಾಗುವ ಸಾಧ್ಯತೆಯಿದೆ ಅಂತ ತಿಳಿಸಿದೆ.
ಇದಲ್ಲದೇ ರಾಜಧಾನಿ ಬೆಂಗಳೂರು ಸೇರಿ ಹಲವೆಡೆ ಮತ್ತೆ ಚಳಿ ಹೆಚ್ಚಾಗುತ್ತಿದೆ. ಬೆಳಿಗ್ಗೆ ತೀವ್ರ ಚಳಿ ಇದ್ದರೆ, ಮಧ್ಯಾಹ್ನದ ವೇಳೆಗೆ ಉಷ್ಣಾಂಶವೂ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.