ಬೆಂಗಳೂರು: ಪಹಣಿಗಳಲ್ಲಿನ ಲೋಪದೋಷಗಳನ್ನು ಸರಿಪಡಿಸಲು ರಾಜ್ಯಾದ್ಯಂತ ಮತ್ತೊಮ್ಮೆ ಕಂದಾಯ ಅದಾಲತ್ ಆಂದೋಲನ ಕೈಗೊಳ್ಳಬೇಕು. ಅಧಿಕಾರಿಗಳು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು. ಕಾಲಕಾಲಕ್ಕೆ ಪಹಣಿ ತಿದ್ದುಪಡಿ ಅಧಿಕಾರವನ್ನು ಸಹಾಯಕ ಆಯುಕ್ತರಿಂದ ತಹಶೀಲ್ದಾರರಿಗೆ ಪ್ರತ್ಯಾಯೋಜಿಸಿ ಮುಂದುವರೆಸಿಕೊಂಡು ಬರಲಾಗುತ್ತಿದೆ.
ಅದರಂತೆ ಅಧಿಕಾರ ಪ್ರತ್ಯಾಯೋಜನೆಯ ಅವಧಿ ಕಳೆದ ಡಿಸೆಂಬರ್ 31ಕ್ಕೆ ಮುಕ್ತಾಯಗೊಂಡಿದೆ. ಅದಾಲತ್ ಮೂಲಕ ಪಹಣಿ ತಿದ್ದುಪಡಿ ಅಧಿಕಾರವನ್ನು ಅವಧಿ ವಿಸ್ತರಿಸಿ ಈಗಾಗಲೇ ಆದೇಶ ಹೊರಡಿಸಿದ್ದು, ಸದ್ಯದಲ್ಲೇ ಅದಾಲತ್‌ನ ದಿನಾಂಕ ಘೋಷಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
ಇನ್ನೂ ಇದೇ ವೇಳೆ ಕರ್ನಾಟಕವನ್ನು ಅನಿಮೇಷನ್, ವಿಷುವಲ್ ಎಫೆಕ್ಟ್, ಗೇಮಿಂಗ್, ಕಾಮಿಕ್ಸ್ ಮತ್ತು ವಿಸ್ತೃತ ರಿಯಾಲಿಟಿ (ಎವಿಜಿಸಿ – ಎಕ್ಸ್‌ಆರ್) ಸಂಬಂಧಿತ ಕೌಶಲಗಳ ಉತ್ಕೃಷ್ಟ ಕೇಂದ್ರವಾಗಿ ಪರಿವರ್ತಿಸುವ ಮೂಲಕ 2028ರ ವೇಳೆಗೆ ಈ ವಲಯದಲ್ಲಿ 30 ಸಾವಿರ ಉದ್ಯೋಗ ಸೃಷ್ಟಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.