ಬೆಂಗಳೂರು: ನಾಮಫಲಕದಲ್ಲಿ ಶೇ.60ರಷ್ಟು ಕನ್ನಡ, ಶೇ.40ರಷ್ಟು ಅನ್ಯ ಭಾಷೆ ಬಳಕೆಗೆ ಅವಕಾಶ ಕಲ್ಪಿಸಲು ನಿಯಮಕ್ಕೆ ತಿದ್ದುಪಡಿ ತಂದು ಹೊರಡಿಸಲಾಗಿದ್ದ ಸುಗ್ರೀವಾಜ್ಞೆಗೆ ಅಂಕಿತ ಹಾಕಲು ರಾಜ್ಯಪಾಲರು ನಕಾರ ವ್ಯಕ್ತಪಡಿಸಿದ್ದು, ವಾಪಸ್ಸು ಕಳುಹಿಸಿದ್ದಾರೆ ಎನ್ನಲಾಗಿದೆ.
ಫೆಬ್ರವರಿಯಲ್ಲೇ ಅಧಿವೇಶನ ನಡೆಯುವಾಗ ಶಾಸನ ಸಭೆಯಲ್ಲೇ ತಿದ್ದಪಡಿ ವಿಧೇಯಕಕ್ಕೆ ಒಪ್ಪಿಗೆ ಪಡೆಯಬಹುದಲ್ಲವೇ ಅಂತ ರಾಜ್ಯಪಾಲರು ರಾಜ್ಯ ಸರ್ಕಾರವನ್ನು ಪ್ರಶ್ನೆ ಮಾಡಿದ್ದಾರೆ. ಜ. 5ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಸುಗ್ರೀವಾಜ್ಞೆ ತರಲು ಅನುಮೋದನೆ ನೀಡಲಾಗಿತ್ತು. ನಾಮಫಲಕದಲ್ಲಿ ಕನ್ನಡ ಕಡೆಗಣನೆ ವಿರೋಧಿಸಿ ಹೋರಾಟ ನಡೆಯುತ್ತಿದ್ದ ವೇಳೇಯಲ್ಲೇ ಸರ್ಕಾರ ಈ ಕೆಲಸ ಮಾಡಿತ್ತು.