ಬೆಂಗಳೂರು : ಆದಾಯ ಮೀರಿ ಆಸ್ತಿಗಳಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ವಿರುದ್ಧ ಕೇಸ್ ಅನ್ನು ರಾಜ್ಯ ಸರ್ಕಾರ ಹಿಂಪಡೆದ ವಿಚಾರವನ್ನು ಪ್ರಶ್ನಿಸಿ ಸಿಬಿಐ ಹಾಗೂ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಸಲ್ಲಿಸಿದ್ದ ಅರ್ಜಿಯನ್ನು ಇಂದು ಹೈಕೋರ್ಟ್ ವಿಚಾರಣೆ ನಡೆಸಲಿದೆ.
ಸರ್ಕಾರದ ಸಮ್ಮತಿ ಪಡೆದಿದ್ದನ್ನು ಪ್ರಶ್ನಿಸಿ ಸಿಬಿಐ ಅರ್ಜಿ ಸಲ್ಲಿಸಿದೆ. ಅಲ್ಲದೆ ಸಿಬಿಐ ಜೊತೆಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿದ್ದ ಅರ್ಜಿಯನ್ನು ಕೂಡ ವಿಚಾರಣೆ ನಡೆಸಲಿದೆ.ಅರ್ಜಿ ಕುರಿತಂತೆ ಹೈಕೋರ್ಟ್ ನ್ಯಾ. ಕೆ ಸೋಮಶೇಖರ್, ನ್ಯಾ. ಉಮೇಶ್ ಹಾಗೂ ನ್ಯಾ. ಅಡಿಗರ ಪೀಠ ಅರ್ಜಿ ವಿಚಾರಣೆ ನಡೆಸಲಿದ್ದಾರೆ.
ಸಿಬಿಐ ತನಿಖೆಗೆ ಸರ್ಕಾರದ ಸಮ್ಮತಿ ಪಡೆದಿದ್ದು ಪ್ರಶ್ನಿಸಿ ಸಿಬಿಐ ಅರ್ಜಿ ಸಲ್ಲಿಸಿದ್ದು, ಸಿಬಿಐ ಹಾಗೂ ಯತ್ನಾಳ್ ಅರ್ಜಿ ವಿಚಾರಣೆಯನ್ನು ಎಂದು ಹೈಕೋರ್ಟ್ ನಡೆಸಲಿದೆ ಎಂದು ಹೇಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ವಿಭಾಗಿಯ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಯಲಿದೆ.
ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ವಾಪಸ್ ಪಡೆಯಲು ಸಚಿವ ಸಂಪುಟ ಒಪ್ಪಿಗೆ ನೀಡಿರುವುದಕ್ಕೆ, ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜ್ಯ ಬಿಜೆಪಿ ನಾಯಕರು ವಾಗ್ದಾಳಿ ಮಾಡಿದ್ದಾರೆ. ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಈ ಕುರಿತು ಎಕ್ಸ್ ನಲ್ಲಿ “ಪ್ರಕರಣವನ್ನು ಹಿಂಪಡೆದಿರುವುದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸುತ್ತೇನೆ. ಭ್ರಷ್ಟಾಚಾರ ಪ್ರಕರಣ ಹಿಂಪಡೆಯಲು ಸರ್ಕಾರ ಮರು ಪರಿಶೀಲಿಸಬೇಕು” ಎಂದು ಬರೆದುಕೊಂಡಿದ್ದರು.
2018ರಲ್ಲಿ ಡಿಕೆಶಿ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿತ್ತು. ಜಾರಿ ನಿರ್ದೇಶನಾಲಯವು ಡಿಕೆ ಶಿವಕುಮಾರ್ ಅವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿತ್ತು. ಈ ಮಧ್ಯೆ ಭ್ರಷ್ಟಾಚಾರ ತಡೆ ಕಾಯ್ದೆಯಡಿ ತನಿಖೆ ಅಗತ್ಯವಿದೆ ಎಂಬ ಕಾರಣಕ್ಕೆ ಸಿಬಿಐ ತನಿಖೆ ನಡೆಸಲು ರಾಜ್ಯ ಸರ್ಕಾರ ಅನುಮತಿ ನೀಡಿತ್ತು. ಅಂದಿನ ಸರ್ಕಾರದ ಸಮ್ಮತಿ ಪಡೆದು ಡಿಕೆಶಿ ವಿರುದ್ಧ ಸಿಬಿಐ ಎಫ್‌ಐಆರ್ ದಾಖಲಿಸಿತ್ತು. ಆದಾಯ ಮೀರಿ ಆಸ್ತಿ ಗಳಿಕೆ ಆರೋಪದಡಿ ಕೇಸ್ ದಾಖಲಿಸಿದ್ದ ಸಿಬಿಐ, 2013 ರಿಂದ 2018ರ ಅವಧಿಯಲ್ಲಿ ಗಳಿಸಿದ ಆದಾಯ, ಹಾಗೂ ವೆಚ್ಚದ ಮಾಹಿತಿ ಆಧರಿಸಿ 74.93 ಕೋಟಿ ರೂ. ಆದಾಯ ಮೀರಿ ಆಸ್ತಿ ಗಳಿಕೆಗೆ ಸಂಬಂಧಿಸಿದಂತೆ ಸಿಬಿಐ ಎಫ್‌ಐಆರ್ ದಾಖಲಿಸಿತ್ತು.