ನವದೆಹಲಿ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ( Board of Control for Cricket in India -BCCI) ಕಾರ್ಯದರ್ಶಿ ಜಯ್ ಶಾ ( Jay Shah ) ಅವರನ್ನು ಏಷ್ಯನ್ ಕ್ರಿಕೆಟ್ ಕೌನ್ಸಿಲ್ (Asian Cricket Council – ACC) ಅಧ್ಯಕ್ಷರಾಗಿ ಮರು ನೇಮಕ ಮಾಡಲಾಗಿದೆ. ಶಾ ಅವರು ಸತತ ಮೂರನೇ ಅವಧಿಗೆ ಎಸಿಸಿಯನ್ನು ಮುನ್ನಡೆಸಲಿದ್ದಾರೆ.
ಕಾಂಟಿನೆಂಟಲ್ ಕ್ರಿಕೆಟ್ ಆಡಳಿತ ಮಂಡಳಿಯ ಮುಖ್ಯಸ್ಥರಾಗಿ ಅವರ ಮರುನೇಮಕವು ಜನವರಿ 31ರ ಇಂದು ಬಾಲಿಯಲ್ಲಿ ನಡೆದ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಸರ್ವಾನುಮತದಿಂದ ಒಪ್ಪಲ್ಪಟ್ಟ ನಿರ್ಧಾರವಾಗಿದೆ ಎಂದು ತಿಳಿದುಬಂದಿದೆ.
ಒಟ್ಟಾರೆಯಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಕಾರ್ಯದರ್ಶಿ ಜಯ್ ಶಾ ಅವರನ್ನು ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ಎಸಿಸಿ) ಅಧ್ಯಕ್ಷರಾಗಿ ಮರು ನೇಮಕಗೊಂಡಿದ್ದಾರೆ. ಈ ಮೂಲಕ ಸತತ ಮೂರನೇ ಅವಧಿಗೆ ಎಸಿಸಿ ಅಧ್ಯಕ್ಷರಾಗಿ ಜಯ್ ಶಾ ಅವರು ನೇಮಕಗೊಂಡಂತೆ ಆಗಿದೆ.
ಮಂಗಳೂರಲ್ಲಿ ಫೆ.17 ರಂದು ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ : ಡಿಸಿಎಂ ಡಿಕೆ ಸ್ಪಷ್ಟನೆ