ಬೆಂಗಳೂರು: ದಿನಾಂಕ 17-02-2024ರಂದು ಮಂಗಳೂರಿನಲ್ಲಿ ಶನಿವಾರ ಮಧ್ಯಾಹ್ನ 2 ಗಂಟೆಗೆ ಕಾಂಗ್ರೆಸ್ ಪಕ್ಷದಿಂದ ಬೃಹತ್ ಕಾರ್ಯಕರ್ತರ ಸಮಾವೇಶವನ್ನ ಹಮ್ಮಿಕೊಳ್ಳಲಾಗಿದೆ.
ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮಾಹಿತಿ ಹಂಚಿಕೊಂಡಿದ್ದು ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಸೂಚನೆಯ ಮೇರೆಗೆ ದಿನಾಂಕ 17-02-2024ರ ಶನಿವಾರ ಮಧ್ಯಾಹ್ನ 2 ಗಂಟೆಗೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ರಾಜ್ಯಮಟ್ಟದ ಬೃಹತ್ ಕಾರ್ಯಕರ್ತರ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದಿದ್ದಾರೆ.
ಈ ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷರಾದಂತ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ಧರಾಮಯ್ಯ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳು, ಸಚಿವರು, ಕೆಪಿಸಿಸಿ ಕಾರ್ಯಾಧ್ಯಕ್ಷರು ಹಾಗೂ ಹಿರಿಯ ಮುಖಂಡರು ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ಈ ಸಮಾವೇಶವನ್ನು ಯಶಸ್ವಿಗೊಳಿಸಲು ರಾಜ್ಯದ ಎಲ್ಲಾ ಸಚಿವರು, ಸಂಸದರು, ಶಾಸಕರು, ಕೆಪಿಸಿಸಿ ಪದಾಧಿಕಾರಿಗಳು, 2023ರ ವಿಧಾನಸಭೆ ಅಭ್ಯರ್ಥಿಗಳು, ಆಕಾಂಕ್ಷಿಗಳು ಸೇರಿದಂತೆ ಎಲ್ಲಾ ಕಾಂಗ್ರೆಸ್ ಕಾರ್ಯಕರ್ತರು ತಪ್ಪದೇ ಭಾಗವಹಿಸುವಂತೆ ಸೂಚಿಸಿದ್ದಾರೆ.
ರಾಜ್ಯ ಸರ್ಕಾರದಿಂದ ‘ವಾರ್ಷಿಕ ಚಲನಚಿತ್ರ ಪ್ರಶಸ್ತಿ’ ಆಯ್ಕೆಗೆ ಸಮಿತಿ ರಚನೆ ಮಾಡಿ ಆದೇಶ
‘ಉದ್ಯೋಗಾಕಾಂಕ್ಷಿ’ಗಳ ಗಮನಕ್ಕೆ: ಫೆ.19, 20ರಂದು ರಾಜ್ಯಮಟ್ಟದ ‘ಬೃಹತ್ ಉದ್ಯೋಗ ಮೇಳ’ ಆಯೋಜನೆ