ಬೆಂಗಳೂರು : ಬಿಗ್ ಬಾಸ್ ಹತ್ತರ ಸೀಸನ್ ನಲ್ಲಿ ಕಾರ್ತಿಕ್ ಮಹೇಶ್ ಅವರು ವಿನ್ನರಾಗಿ ಹೊರಹಮ್ಮಿದ್ದು, ಅದೇ ರೀತಿಯಾಗಿ ಮೊದಲ ರನ್ನರ್ ಅಪ್ ಆಗಿ ಡ್ರೋನ್ ಪ್ರತಾಪ್ ಅವರು ಹೊರ ಹೊಮ್ಮಿದ್ದಾರೆ. ಇದರ ಬೆನ್ನಲ್ಲೇ ಡ್ರೋನ್ ಪ್ರತಾಪಗೆ ಒಂದಾದರೋಂದ ಮೇಲಂತೆ ಅವಕಾಶಗಳು ಹುಡುಕಿಕೊಂಡು ಬರುತ್ತಿವೆ.
ಹೌದು ಬಿಗ್ ಬಾಸ್ ಮೊದಲನೇ ರನ್ನರ್ ಅಪ್ ಆದ ಬೆನ್ನಲ್ಲೇ ಕಲರ್ಸ್ ಕನ್ನಡ ವಾಹಿನಿಯು ಡ್ರೋನ್ ಪ್ರತಾಪ್ ಅವರಿಗೆ ಮತ್ತೊಂದು ಬಿಗ್ ಆಫರ್ ನೀಡಿದೆ. ವಾಹಿನಿಯ ಅತ್ಯಂತ ಜನಪ್ರಿಯ ಶೋ ಗಿಚ್ಚಿಗಿಲಿಗಿಲಿ ಕಾರ್ಯಕ್ರಮದಲ್ಲಿ ಡ್ರೋನ್ ಪ್ರತಾಪ್ ಕಂಟೆಸ್ಟೆಂಟ್ ಆಗಿ ಆಯ್ಕೆಯಾಗಿದ್ದಾರೆ. ಇಂದಿನಿಂದ ರಿಯಾಲಿಟಿ ಶೋದ ಚಿತ್ರೀಕರಣ ಕೂಡ ನಡೆಯುತ್ತಿದೆ ಎಂದು ತಿಳಿದುಬಂದಿದೆ.
ಡ್ರೋನ್ ಪ್ರತಾಪ್ ಮಾತ್ರವಲ್ಲ, ತುಕಾಲಿ ಸಂತೋಷ್, ಮೈಕಲ್ ಮತ್ತು ಇಶಾನಿ ಕೂಡ ಈ ಬಾರಿ ಗಿಚ್ಚಿಗಿಲಿಗಿಲಿಯಲ್ಲಿ ಪ್ರೇಕ್ಷಕರನ್ನು ನಕ್ಕು ನಗಿಸಲಿದ್ದಾರೆ. ಮೂವರು ಕೂಡ ಇಂದಿನಿಂದ ಚಿತ್ರೀಕರಣದಲ್ಲಿ ಭಾಗಿಯಾಗಲಿದ್ದಾರೆ. ಶ್ರುತಿ, ಕೋಮಲ್, ಸಾಧು ಕೋಕಿಲಾ ನಿರ್ಣಾಕರಾಗಿದ್ದಾರೆ.
ಇದೆಲ್ಲದರ ನಡುವೆ ಡ್ರೋನ್ ಪ್ರತಾಪ್ ಗೆ ಸಂಕಷ್ಟ ಎದುರಾಗಿದ್ದು ಬಿಬಿಎಂಪಿ ಅಧಿಕಾರಿ ಒಬ್ಬರು ಅವರ ಮೇಲೆ ಮಾನ ನಷ್ಟ ಮೊಕದ್ದಮ್ಮೆ ಹೂಡಿದ್ದು, ಎರಡು ಕೋಟಿ ರೂಪಾಯಿ ಮಾನ ನಷ್ಟ ಮೊಕದಮ್ಮೆ ಹೂಡಿದ್ದಾರೆ, ಇದರ ಅಂಗವಾಗಿ ಇದೇ ತಿಂಗಳು ಅಂದರೆ ಫೆಬ್ರವರಿ 20ರಂದು ವಿಚಾರಣೆಗೆ ಹಾಜರಾಗುವಂತೆ ಕೋರ್ಟ್ ಕೂಡ ಸಮನ್ಸ್ ನೀಡಿದೆ ಎಂದು ಹೇಳಲಾಗುತ್ತಿದೆ.
ಪೂಣಾ ಮೂಲದ ಸಾರಂಗ್ ಮಾನೆ ಎನ್ನುವವರು ಡ್ರೋಣ್ ಪ್ರತಾಪ್ ಗೆ ಬರೋಬ್ಬರಿ 83 ಲಕ್ಷ ರೂಪಾಯಿ ನೀಡಿದ್ದಾರಂತೆ. ಈ ಹಣದಲ್ಲಿ 8 ಡ್ರೋಣ್ ನೀಡುವುದಾಗಿ ಪ್ರತಾಪ್ ಹೇಳಿದ್ದರಂತೆ. ಆದರೆ, ಕೊಟ್ಟ ಮಾತಿನಂತೆ ಪ್ರತಾಪ್ ನಡೆದುಕೊಂಡಿಲ್ಲ ಎನ್ನುವುದು ಮಾನೆ ಅವರ ಆರೋಪವಾಗಿದೆ.ಪ್ರತಾಪ್ ಈಗಾಗಲೇ 2 ಡ್ರೋಣ್ ಕಳಿಸಿದ್ದಾರೆ. ಆದರೆ, ಅವು ಸರಿಯಾಗಿ ಕಾರ್ಯ ಮಾಡುತ್ತಿಲ್ಲ.
ಒಂದು ವರ್ಷವಾಗಿದೆ ಹಣವನ್ನೂ ಕೊಡುತ್ತಿಲ್ಲ ಎಂದು ಸಾರಂಗ್ ಮಾನೆ. ಆರೋಪ ಮಾಡುತ್ತಿದ್ದಾರೆ. ರೈತರ ಬೆಳೆಗಳಿಗೆ ಕ್ರಿಮಿನಾಶಕ ಔಷಧ ಸಿಂಪಡಿಸುವ ಡ್ರೋಣ್ ಗಳ ಎಕ್ಸಿಬಿಷನ್ ವೇಳೆ ಸಾರಂಗ್ ಮಾನೆ ಅವರಿಗೆ ಡ್ರೋಣ್ ಪ್ರತಾಪ್ ಪರಿಚವಾಗಿದ್ದರಂತೆ. ರೈತರಿಗೆ ಡ್ರೋಣ್ ಕಳಿಸಿಕೊಡುವ ಟೆಂಡರ್ ಪಡೆದಿದ್ದ ಸಾರಂಗ್ ಮಾನೆ ಅವರು ಪ್ರತಾಪ್ ಗೆ ಆ ಜವಾಬ್ದಾರಿ ನೀಡಿದ್ದರು.