ರಾಂಚಿ: ನಿನ್ನೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿಯಿಂದ ಬಂಧನಕ್ಕೆ ಒಳಗಾಗಿದ್ದಂತ ಜಾರ್ಖಂಡ್ ಮಾಜಿ ಸಿಎಂ ಹೇಮಂತ್ ಸೊರೆನ್ ಅವರನ್ನು ಇಂದು ರಾಂಚಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಅವರನ್ನು ರಾಂಚಿಯ ಪಿಎಂಎಲ್ಎ ನ್ಯಾಯಾಲಯವು 1 ದಿನ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದೆ.
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಜಾರ್ಖಂಡ್ ಮಾಜಿ ಸಿಎಂ ಹೇಮಂತ್ ಸೊರೆನ್ ಅವರನ್ನು ನಿನ್ನೆ ಬಂಧಿಸಲಾಗಿತ್ತು. ಇಂದು ಅವರನ್ನು ರಾಂಚಿಯ ಪಿಎಂಎಲ್ಎ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.
ಈ ವೇಳೆ ನ್ಯಾಯಾಲಯದ ಮುಂದೆ ಇಡಿ ಪರ ವಕೀಲರು ಹೇಮಂತ್ ಸೊರೆನ್ ಅವರನ್ನು ಹೆಚ್ಚಿನ ವಿಚಾರಣೆಗಾಗಿ ತಮ್ಮ ವಶಕ್ಕೆ ನೀಡುವಂತೆ ಕೋರಿದರು. ಅವರ ಮನವಿ ಪುರಸ್ಕರಿಸಿದಂತ ರಾಂಚಿಯ ಪಿಎಂಎಲ್ಎ ನ್ಯಾಯಾಲಯವು 1 ದಿನಗಳ ಕಾಲ ಹೇಮಂತ್ ಸೊರೆನ್ ಅವರನ್ನು 1 ದಿನ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದೆ. ಈ ಮೂಲಕ ಹೇಮಂತ್ ಸೊರೆನ್ ಜೈಲು ಪಾಲಾಗುವಂತೆ ಆಗಿದೆ.