ರಾಯಚೂರು: ಜಿಲ್ಲೆಯಲ್ಲಿ ಅಪರಿಚಿತರಿಂದ ಟಿಪ್ಪು ಸುಲ್ತಾನ್ ಭಾವಚಿತ್ರಕ್ಕೆ ಚಪ್ಪಲಿ ಹಾರವನ್ನು ಹಾಕಲಾಗಿತ್ತು. ಇದರಿಂದ ಆಕ್ರೋಶಗೊಂಡು ಪ್ರತಿಭಟನೆಯನ್ನು ಸ್ಥಳೀಯರು ನಡೆಸಿದ್ದರು. ಈ ಘಟನೆ ಸಂಬಂಧ ಇಬ್ಬರು ಪೊಲೀಸ್ ಪೇದೆಗಳನ್ನು ಅಮಾನತುಗೊಳಿಸಲಾಗಿದೆ.
ಕಳೆದ ಮೂರು ದಿನಗಳ ಹಿಂದೆ ರಾಯಚೂರಿನಲ್ಲಿ ಟಿಪ್ಪು ಸುಲ್ತಾನ್ ಭಾವಚಿತ್ರಕ್ಕೆ ಅಪರಿಚಿತ ದುಷ್ಕರ್ಮಿಗಳು ಚಪ್ಪಲಿ ಹಾರ ಹಾಕಿದ್ದರು. ರಾಯಚೂರು ಜಿಲ್ಲೆಯ ಸಿರವಾರ ಪಟ್ಟಣದಲ್ಲಿ ಈ ಘಟನೆ ವರದಿಯಾಗಿದ್ದು, ಉದ್ವಿಗ್ನ ಪರಿಸ್ಥಿತಿ ಮತ್ತು ಮುಸ್ಲಿಂ ಸಮುದಾಯದಿಂದ ಭಾರಿ ಪ್ರತಿಭಟನೆಗೆ ಕಾರಣವಾಗಿತ್ತು.
ಮಟನ್ ಮಾರ್ಕೆಟ್ ಬಳಿಯ ಟಿಪ್ಪು ವೃತ್ತದ ಬಳಿ ಈ ಘಟನೆ ನಡೆದ್ದರು. ದುಷ್ಕರ್ಮಿಗಳನ್ನು ಬಂಧಿಸುವಂತೆ ಒತ್ತಾಯಿಸಿ ಪ್ರತಿಭಟನಾಕಾರರು ರಸ್ತೆ ಸಂಚಾರ ತಡೆ ನಡೆಸಲಾಗಿತ್ತು. ಮುಸ್ಲಿಂ ಸಮುದಾಯವು ರಸ್ತೆಯ ಮಧ್ಯದಲ್ಲಿ ಟೈರ್ ಗಳಿಗೆ ಬೆಂಕಿ ಹಚ್ಚುವ ಮೂಲಕ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದರು.
ಈ ಘಟನೆ ಸಂಬಂಧ ಅಂದು ರಾತ್ರಿ ಪಾಳಿಯಲ್ಲಿದ್ದಂತ ಸಿರಿವಾರ ಠಾಣೆಯ ಇಬ್ಬರು ಪೇದೆಗಳಾದಂತ ಇಸ್ಮಾಯಿಲ್ ಹಾಗೂ ರೇವಣ್ಣ ಸಿದ್ಧಪ್ಪ ಕರ್ತವ್ಯ ಲೋಪ ಎಸಗಿರೋದಾಗಿ ತಿಳಿದು ಬಂದಿತ್ತು. ಈ ಘಟನೆಯ ಹಿನ್ನಲೆಯಲ್ಲಿ ಇಬ್ಬರು ಪೊಲೀಸ್ ಪೇದೆಗಳನ್ನು ಅಮಾನತುಗೊಳಿಸಿ ರಾಯಚೂರು ಎಸ್ಪಿ ಬಿ.ನಿಖಿಲ್ ಆದೇಶಿಸಿದ್ದಾರೆ.
ಬಿಜೆಪಿಗೆ ಹೀನಾಯ ಸೋಲುಣಿಸಿದ ಬೊಮ್ಮಾಯಿಗೆ ನೈತಿಕ ಹಕ್ಕು ಇಲ್ಲ: ಎಂ.ಬಿ ಪಾಟೀಲ ತಿರುಗೇಟು
BREAKING : ಜಾರ್ಖಂಡ್ ಮಾಜಿ ಸಿಎಂ ‘ಹೇಮಂತ್ ಸೊರೆನ್’ 5 ದಿನ ‘ED ಕಸ್ಟಡಿ’ಗೆ ನೀಡಿದ ಕೋರ್ಟ್