ರಾಮನಗರ: ಜಿಲ್ಲೆಯ ಕನಕಪುರ ತಾಲೂಕು ಕಚೇರಿಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಚುನಾವಣಾ ಶಾಖಾಧಿಕಾರಿಯೊಬ್ಬರು ಶವವಾಗಿ ಪತ್ತೆಯಾಗಿರೋದಾಗಿ ತಿಳಿದು ಬಂದಿದೆ.
ರಾಮನಗರ ಜಿಲ್ಲೆಯ ಕನಕಪುರ ತಾಲೂಕು ಕಚೇರಿಯಲ್ಲಿ ಚುನಾವಣಾ ಶಾಖಾಧಿಕಾರಿಯಾಗಿ ಸುರೇಶ್ ಎಂಬುವರು ಕರ್ತವ್ಯ ನಿರ್ವಹಿಸುತ್ತಿದ್ದರು. ಅವರು ಇಂದು ನೇಣುಬಿಗಿದುಕೊಂಡ ಸ್ಥಿತಿಯಲ್ಲಿ ಕಚೇರಿಯಲ್ಲೇ ಶವವಾಗಿ ಪತ್ತೆಯಾಗಿದ್ದಾರೆ.
ಚುನಾವಣಾ ಶಾಖಾಧಿಕಾರಿ ಸುರೇಶ್ ಅವರು ನೇಣುಬಿಗಿದುಕೊಂಡ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿರೋದು ಹಲವು ಅನುಮಾನಗಳಿಗೂ ಕಾರಣವಾಗಿದೆ.
ಈ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದಂತ ಕನಕಪುರ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.
BREAKING: ಬೆಂಗಳೂರಲ್ಲಿ ‘ED ಅಧಿಕಾರಿ’ಗಳ ವಿರುದ್ಧದ ‘FIR’: ಪೊಲೀಸರ ತನಿಖೆಗೆ ‘ಹೈಕೋರ್ಟ್’ ತಡೆ